ನಿವೃತ್ತ ಪ್ರಾಂಶುಪಾಲ, ಹಿರಿಯ ಪತ್ರಕರ್ತ ಪ್ರೊ. ಕೆ. ಬಾಲಕೃಷ್ಣ ಗಟ್ಟಿ ನಿಧನ - Karavali Times ನಿವೃತ್ತ ಪ್ರಾಂಶುಪಾಲ, ಹಿರಿಯ ಪತ್ರಕರ್ತ ಪ್ರೊ. ಕೆ. ಬಾಲಕೃಷ್ಣ ಗಟ್ಟಿ ನಿಧನ - Karavali Times

728x90

13 June 2026

ನಿವೃತ್ತ ಪ್ರಾಂಶುಪಾಲ, ಹಿರಿಯ ಪತ್ರಕರ್ತ ಪ್ರೊ. ಕೆ. ಬಾಲಕೃಷ್ಣ ಗಟ್ಟಿ ನಿಧನ

ಬಂಟ್ವಾಳ, ಜೂನ್ 13, 2026 (ಕರಾವಳಿ ಟೈಮ್ಸ್) : ನಿವೃತ್ತ ಪ್ರಾಂಶುಪಾಲ, ಹಿರಿಯ ಪತ್ರಕರ್ತ ಪೆÇ್ರ ಕೆ ಬಾಲಕೃಷ್ಣ ಗಟ್ಟಿ (83) ಅವರು ಜೂನ್ 12 ರಂದು £ಧನರಾದರು. ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಇವರು ಬಳಿಕ ಮಂಗಳೂರಿನಲ್ಲಿ ನೆಲೆಸಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

ಮೂಲತಃ ಕಾಸರಗೋಡು ನಿವಾಸಿಯಾಗಿರುವ ಇವರು ಬಂಟ್ವಾಳದಲ್ಲಿ ಸುದೀರ್ಘ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದು, ಬುಲೆಟ್ ಮೇಸ್ಟ್ರು ಎಂದೇ ಪರಿಚಿತರಾಗಿದ್ದರು. ಉತ್ತಮ ವಾಗ್ಮಿಯಾಗಿದ್ದ ಅವರು ಎಡಪಂಥೀಯ ಚಿಂತನೆಗಳಿಂದ ಆಕರ್ಷಿತರಾಗಿದ್ದರು.

ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ವರದಿಗಾರರಾಗಿದ್ದರು. ನೇತ್ರಾವತಿ ವಾರ್ತೆ ದೈನಿಕವನ್ನು ಪ್ರಾರಂಭಿಸಿ ಅನೇಕ ಕಿರಿಯ ಪತ್ರಕರ್ತರಿಗೆ ಮಾರ್ಗದರ್ಶಕರಾಗಿದ್ದರು. ಜನವಾಹಿನಿ ದೈನಿಕದ ಸಂಪಾದಕರಾಗಿ ಪತ್ರಿಕೆಯನ್ನು ಮುನ್ನಡೆಸಿದ್ದ ಬಾಲಕೃಷ್ಣ ಗಟ್ಟಿ ಸರಳ ನಿಷ್ಠುರ ಬರೆವಣಿಗೆ ಮೂಲಕ ಪತ್ರಿಕಾ ರಂಗದಲ್ಲಿ ದಶಕಗಳ ಕಾಲ ಗುರುತಿಸಲ್ಪಟ್ಟಿದ್ದರು. ಬಂಟ್ವಾಳ ತಾಲೂಕು ಗ್ರಾಮೀಣ ಪತ್ರಕರ್ತರ ಸಂಘ ಸ್ಥಾಪನೆ ಮಾಡಿ ಸ್ಥಾಪಕಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 2024 ನವಂಬರ 12ರ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ನಿವೃತ್ತ ಪ್ರಾಂಶುಪಾಲ, ಹಿರಿಯ ಪತ್ರಕರ್ತ ಪ್ರೊ. ಕೆ. ಬಾಲಕೃಷ್ಣ ಗಟ್ಟಿ ನಿಧನ Rating: 5 Reviewed By: karavali Times
Scroll to Top