ಯುವಕನಿಂದ ಗರ್ಭವತಿಯಾಗಿದ್ದ ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ : ಯುವಕನ ವಿರುದ್ದ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಯುವಕನಿಂದ ಗರ್ಭವತಿಯಾಗಿದ್ದ ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ : ಯುವಕನ ವಿರುದ್ದ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

24 June 2026

ಯುವಕನಿಂದ ಗರ್ಭವತಿಯಾಗಿದ್ದ ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ : ಯುವಕನ ವಿರುದ್ದ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು, ಜೂನ್ 24, 2026 (ಕರಾವಳಿ ಟೈಮ್ಸ್) : ಪ್ರೀತಿಯ ಹೆಸರಿನಲ್ಲಿ ಯುವಕನೋರ್ವ ಅಪ್ರಾಪ್ತ ಬಾಲಕಿಯನ್ನು ಗರ್ಭವತಿ ಮಾಡಿದ್ದು, ಬಳಿಕ ಮೋಸ ಹೋದ ಬಾಲಕಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 23 ರಂದು ಸಂಜೆ ಸಂಭವಿಸಿದೆ. 

ಆರೋಪಿಯನ್ನು ಅನೀಶ್ ಪೂಜಾರಿ ಎಂದು ಹೆಸರಿಸಲಾಗಿದ್ದು, ಆತನ ವಿರುದ್ದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ, ಅತ್ಯಾಚಾರ ಹಾಗೂ ಆತ್ಮಹತ್ಯೆಗೆ ಪ್ರೇರಣೆ ಪ್ರಕರಣ ದಾಖಲಾಗಿದೆ. 17 ವರ್ಷದ ಸಂತ್ರಸ್ತ ಬಾಲಕಿ ಜೂನ್ 23 ರಂದು ಸಂಜೆ 4 ಗಂಟೆಗೆ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಆಕೆ ತನ್ನ ಪೆÇೀಷಕರಿಗೆ ಬರೆದಿಟ್ಟಿದ್ದ ಡೆತ್ ನೋಟ್ ನಲ್ಲಿ ‘ತಾನು ಒಂದು ತಪ್ಪು ಮಾಡಿದ್ದೇನೆ ಎಂದು ತಿಳಿಸಿದ್ದು, “ಅವನು ಸಂತೋಷವಾಗಿದ್ದಾನೆ” ಹಾಗೂ “ಅವನು ಹಿಂದೂ ಸಂಘಟನೆಗಳೊಂದಿಗೆ ಇದ್ದರೂ, ಆ ಸಂಘಟನೆಗಳು ನನಗೆ ಸಹಾಯ ಮಾಡಲಿಲ್ಲ” ಎಂದು ಉಲ್ಲೇಖಿಸಿದ್ದಾಳೆ. ರಾತ್ರಿ ಸುಮಾರು 11 ಗಂಟೆಗೆ ಪೆÇೀಷಕರು ನೀಡಿದ ದೂರಿನಲ್ಲಿ, ತಮ್ಮ ಮಗಳು ಗರ್ಭಿಣಿಯಾಗಿದ್ದು, ಆಕೆಯ ಆತ್ಮಹತ್ಯೆಗೆ ಅನೀಶ್ ಕಾರಣ ಎಂದು ಆರೋಪಿಸಿದ್ದಾರೆ.

ಈ ದೂರಿನ ಆಧಾರದ ಮೇಲೆ, ರಾತ್ರಿ 1 ಗಂಟೆಗೆ ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ಅನೀಶ್ ಪೂಜಾರಿ ವಿರುದ್ಧ ಪೆÇೀಕ್ಸೊ ಕಾಯ್ದೆ, ಅತ್ಯಾಚಾರ ಹಾಗೂ ಆತ್ಮಹತ್ಯೆಗೆ ಪ್ರೇರಣೆ ಆರೋಪಗಳಡಿ ಎಫ್.ಐ.ಆರ್ ದಾಖಲಾಗಿದೆ. 

ಮರಣೋತ್ತರ ಪರೀಕ್ಷೆ (ಪೆÇೀಸ್ಟ್‍ಮಾರ್ಟಂ) ಪೂರ್ಣಗೊಂಡಿದ್ದು, ಡಿ ಎನ್ ಎ ಪರೀಕ್ಷೆಗಾಗಿ ವೈದ್ಯರು ಭ್ರೂಣವನ್ನು ಸಂಗ್ರಹಿಸಿದ್ದಾರೆ. ಆರೋಪಿಯನ್ನು ಬಂಧಿಸಲು ಪೊಲೀಸರು ವಿಶೇಷ ತಂಡ ರಚಿಸಿ ಕಾರ್ಯಪ್ರವೃತ್ತರಾಗಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಯುವಕನಿಂದ ಗರ್ಭವತಿಯಾಗಿದ್ದ ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ : ಯುವಕನ ವಿರುದ್ದ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top