ಸಜಿಪಮುನ್ನೂರು ಹಾಗೂ ಮೂಡ ವಲಯ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಎಸ್.ಐ.ಆರ್. ಮಾಹಿತಿ ಕಾರ್ಯಕ್ರಮ - Karavali Times ಸಜಿಪಮುನ್ನೂರು ಹಾಗೂ ಮೂಡ ವಲಯ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಎಸ್.ಐ.ಆರ್. ಮಾಹಿತಿ ಕಾರ್ಯಕ್ರಮ - Karavali Times

728x90

17 June 2026

ಸಜಿಪಮುನ್ನೂರು ಹಾಗೂ ಮೂಡ ವಲಯ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಎಸ್.ಐ.ಆರ್. ಮಾಹಿತಿ ಕಾರ್ಯಕ್ರಮ

 ಬಂಟ್ವಾಳ, ಜೂನ್ 17, 2026 (ಕರಾವಳಿ ಟೈಮ್ಸ್) : ಸಜಿಪಮುನ್ನೂರು ಹಾಗೂ ಸಜಿಪಮೂಡ ವಲಯ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ಎಸ್.ಐ.ಆರ್. ಬಗ್ಗೆ ಪೂರ್ವ ಭಾವಿ ಸಭೆ ಜೂನ್ 17 ರಂದು ಬುಧವಾರ ಅಪರಾಹ್ನ 3.30ಕ್ಕೆ ಕಂದೂರು ಗೌರಿ ಗಣೇಶ್ ಸಭಾಂಗಣದಲ್ಲಿ ನಡೆಯಿತು. 

ಸಭೆಯಲ್ಲಿ ಮಾಜಿ ಸಚಿವರೂ, ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ಶ್ರೀಯುತ ಬಿ ರಮಾನಾಥ ರೈ, ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಭಂಡಾರಿ, ತಾ.ಪಂ. ಮಾಜಿ ಸದಸ್ಯೆ ನಸೀಮಾ ಬೇಗಂ ನಂದಾವರ, ಸಜಿಪಮೂಡ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಶೋಭಾ ಶೆಟ್ಟಿ, ಮಾಜಿ ಅಧ್ಯಕ್ಷ ವಿಶ್ವನಾಥ ಬೆಳ್ಚಡ, ಸಜಿಪಮೂಡ ಹಾಗೂ ಸಜಿಪಮುನ್ನೂರು ಗ್ರಾ ಪಂ ಮಾಜಿ ಸದಸ್ಯರುಗಳು, ಪಕ್ಷದ ಬಿ ಎಲ್ ಎ ಗಳು, ಬೂತ್ ಅಧ್ಯಕ್ಷರುಗಳು ಮೊದಲಾದವರು ಭಾಗವಹಿಸಿದ್ದರು. 

ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಎಸಿಎಫ್ ಶ್ರಿ ಮುಹಮ್ಮದ್ ಬ್ಯಾರಿ ಬೊಳ್ಳಾಯಿ, ಎಸ್.ಐ.ಆರ್. ಬಗ್ಗೆ ಮಾಹಿತಿ ನೀಡಿದರು. ಸಜಿಪಮುನ್ನೂರು ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಯೂಸುಫ್ ಕರಂದಾಡಿ ಸ್ವಾಗತಿಸಿ, ಸಜಿಪಮೂಡ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಶ್ ಪೂಜಾರಿ ವಂದಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಸಜಿಪಮುನ್ನೂರು ಹಾಗೂ ಮೂಡ ವಲಯ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಎಸ್.ಐ.ಆರ್. ಮಾಹಿತಿ ಕಾರ್ಯಕ್ರಮ Rating: 5 Reviewed By: karavali Times
Scroll to Top