ಅಪ್ರಾಪ್ತ ಬಾಲಕಿಗೆ ಇಬ್ಬರು ಅಪ್ರಾಪ್ತ ಬಾಲಕರಿಂದ ಲೈಂಗಿಕ ದೌರ್ಜನ್ಯ : ವೇಣೂರು ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲು - Karavali Times ಅಪ್ರಾಪ್ತ ಬಾಲಕಿಗೆ ಇಬ್ಬರು ಅಪ್ರಾಪ್ತ ಬಾಲಕರಿಂದ ಲೈಂಗಿಕ ದೌರ್ಜನ್ಯ : ವೇಣೂರು ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲು - Karavali Times

728x90

24 June 2026

ಅಪ್ರಾಪ್ತ ಬಾಲಕಿಗೆ ಇಬ್ಬರು ಅಪ್ರಾಪ್ತ ಬಾಲಕರಿಂದ ಲೈಂಗಿಕ ದೌರ್ಜನ್ಯ : ವೇಣೂರು ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲು

ವೇಣೂರು, ಜೂನ್ 24, 2026 (ಕರಾವಳಿ ಟೈಮ್ಸ್) : 2023 ರಲ್ಲಿ ಅಪ್ರಾಪ್ತ ಬಾಲಕಿಯನ್ನು ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಈ ಬಗ್ಗೆ ಬಾಲಕಿಯ ತಾಯಿ ಜೂನ್ 23 ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದೆ. 

ದೂರುದಾರ ಮಹಿಳೆಯ ಅಪ್ರಾಪ್ತ ಪ್ರಾಯದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಇತ್ತೀಚೆಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮಹಿಳೆ ತನ್ನ ಮಗಳನ್ನು ವಿಚಾರಿಸಿದಾಗ, ಮಹಿಳೆಯ ಸಂಬಂಧಿಕನಾದ ಅಪ್ರಾಪ್ತ ಬಾಲಕ ಹಾಗೂ ಆತನ ಸ್ನೇಹಿತನಾದ ಮತ್ತೋರ್ವ ಅಪ್ರಾಪ್ತ ಬಾಲಕರಿಬ್ಬರು ಸೇರಿ 2023ರಲ್ಲಿ ಬೆಳ್ತಂಗಡಿಯಲ್ಲಿರುವ ಡ್ಯಾಂ ಒಂದರ ಬಳಿಯಿರುವ ಕಟ್ಟಡಕ್ಕೆ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದು ಹಾಗೂ ಬಾಲಕಿಗೆ ಜೀವಬೆದರಿಕೆ ಒಡ್ಡಿರುವುದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಜೂನ್ 23 ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಅಪ್ರಾಪ್ತ ಬಾಲಕಿಗೆ ಇಬ್ಬರು ಅಪ್ರಾಪ್ತ ಬಾಲಕರಿಂದ ಲೈಂಗಿಕ ದೌರ್ಜನ್ಯ : ವೇಣೂರು ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top