ಶಾಲೆ ಹಾಗೂ ಪಿಯು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ : ಆನ್ ಲೈನ್ ಅರ್ಜಿ ಆಹ್ವಾನಿಸಿದ ಕೆ.ಎಸ್.ಆರ್.ಟಿ.ಸಿ. - Karavali Times ಶಾಲೆ ಹಾಗೂ ಪಿಯು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ : ಆನ್ ಲೈನ್ ಅರ್ಜಿ ಆಹ್ವಾನಿಸಿದ ಕೆ.ಎಸ್.ಆರ್.ಟಿ.ಸಿ. - Karavali Times

728x90

1 June 2026

ಶಾಲೆ ಹಾಗೂ ಪಿಯು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ : ಆನ್ ಲೈನ್ ಅರ್ಜಿ ಆಹ್ವಾನಿಸಿದ ಕೆ.ಎಸ್.ಆರ್.ಟಿ.ಸಿ.

ಮಂಗಳೂರು, ಜೂನ್ 01, 2026 (ಕರಾವಳಿ ಟೈಮ್ಸ್) : 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಕೆ.ಎಸ್.ಆರ್.ಟಿ.ಸಿ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾ ಸಿಂಧು ಪೆÇೀರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸುಗಳನ್ನು ವಿತರಿಸಲಾಗುತ್ತದೆ. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾ ಸಿಂಧು ಪೆÇೀರ್ಟಲಿನಲ್ಲಿ ಅರ್ಜಿ ಸಲ್ಲಿಸಬೇಕು. 

ಆನ್‍ಲೈನ್ ಪೆÇೀರ್ಟಲಿನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂಪಾಯಿ ಸೇವಾ ಶುಲ್ಕವನ್ನು ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ಸು ಪಾಸಿಗಾಗಿ ಅರ್ಜಿ ಸಲ್ಲಿಸಲು ಡಿಕ್ಲೇರೇಶನ್ ಫಾರ್ಮ್ ಸೇವಾ ಸಿಂಧು ತಂತ್ರಾಂಶದಲ್ಲಿ ಅಥವಾ ಕೆ.ಎಸ್.ಆರ್.ಟಿ.ಸಿ ನಿಗಮದ ವೆಬ್ ಸೈಟಿನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಹಾಗೂ  ಡಿಕ್ಲೇರೇಶನ್ ಫಾರ್ಮ್ ಭರ್ತಿಮಾಡಿ ಶಾಲಾ/ ಕಾಲೇಜು ಮುಖೋಪಾಧ್ಯಾಯರ/ ಪ್ರಾಂಶುಪಾಲರ ಸಹಿ ಮತ್ತು ಶಾಲಾ/ ಕಾಲೇಜು ಮೊಹರಿನೊಂದಿಗೆ ಅರ್ಜಿ ಸಲ್ಲಿಸುವಾಗ ಅಪ್‍ಲೋಡ್ ಮಾಡಬೇಕು.  

ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರಿನ ಹೆಸರು/ ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಬಸ್ಸು ಪಾಸುಗಳನ್ನು ಜೂನ್ 1 ರಿಂದ ನಿಗದಿತ ಕೌಂಟರುಗಳಲ್ಲಿ ವಿತರಿಸಲಾಗುತ್ತದೆ. ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರಿಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದು. 

ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆ ರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ/ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿ ಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ಸು ಪಾಸು ಪಡೆಯುವ ಅಗತ್ಯವಿದೆ. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹುದು.  

ಕೆ.ಎಸ್.ಆರ್.ಟಿ.ಸಿ ನಿಗಮ ವ್ಯಾಪ್ತಿಯ ಪಾಸ್ ವಿತರಣಾ ಕೌಂಟರುಗಳ ವಿವರಗಳನ್ನು ನಿಗಮದ ವೆಬ್ ಸೈಟಿನಲ್ಲಿ ಒದಗಿಸಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಶಾಲೆ ಹಾಗೂ ಪಿಯು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ : ಆನ್ ಲೈನ್ ಅರ್ಜಿ ಆಹ್ವಾನಿಸಿದ ಕೆ.ಎಸ್.ಆರ್.ಟಿ.ಸಿ. Rating: 5 Reviewed By: karavali Times
Scroll to Top