ಕಳ್ಳತನ ಪ್ರಕರಣ ಬೇಧಿಸಿದ ಪೂಂಜಾಲಕಟ್ಟೆ ಪೊಲೀಸರು : ಇಬ್ಬರು ಅಂತರ್ ರಾಜ್ಯ ಖದೀಮರು ಪೊಲೀಸ್ ಬಲೆಗೆ, ಲಕ್ಷಾಂತರ ಮೌಲ್ಯದ ಸೊತ್ತುಗಳು ವಶಕ್ಕೆ - Karavali Times ಕಳ್ಳತನ ಪ್ರಕರಣ ಬೇಧಿಸಿದ ಪೂಂಜಾಲಕಟ್ಟೆ ಪೊಲೀಸರು : ಇಬ್ಬರು ಅಂತರ್ ರಾಜ್ಯ ಖದೀಮರು ಪೊಲೀಸ್ ಬಲೆಗೆ, ಲಕ್ಷಾಂತರ ಮೌಲ್ಯದ ಸೊತ್ತುಗಳು ವಶಕ್ಕೆ - Karavali Times

728x90

8 June 2026

ಕಳ್ಳತನ ಪ್ರಕರಣ ಬೇಧಿಸಿದ ಪೂಂಜಾಲಕಟ್ಟೆ ಪೊಲೀಸರು : ಇಬ್ಬರು ಅಂತರ್ ರಾಜ್ಯ ಖದೀಮರು ಪೊಲೀಸ್ ಬಲೆಗೆ, ಲಕ್ಷಾಂತರ ಮೌಲ್ಯದ ಸೊತ್ತುಗಳು ವಶಕ್ಕೆ

 ಬಂಟ್ವಾಳ, ಜೂನ್ 09, 2026 (ಕರಾವಳಿ ಟೈಮ್ಸ್) :  ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಪ್ರಿಲ್ 5 ರಂದು ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣ ಬೇಧಿಸಿದ ಪೊಲೀಸರು ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮೂಲತಃ ಕೊಳ್ನಾಡು ನಿವಾಸಿಗಳಾಗಿದ್ದು, ಪ್ರಸ್ತುತ ಕಾಸರಗೋಡಿನಲ್ಲಿ ವಾಸವಾಗಿರುವ ಹಮೀದ್ ಹಾಗೂ ಜಾಬಿರ್ ಅಲಿಯಾಸ್ ಜಾಬೀ (28) ಎಂದು ಗುರುತಿಸಲಾಗಿದೆ.

 ಆರೋಪಿ ಹಮೀದ್ ಎಂಬಾತನನ್ನು ಮೇ 15 ರಂದು ವಶಕ್ಕೆ ಪಡೆದ ತನಿಖಾ ತಂಡ ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. 

ಈತನ ವಿಚಾರಣೆಯ ವೇಳೆ ನೀಡಿದ ಮಾಹಿತಿಯ ಅಧಾರದಲ್ಲಿ ಜೂನ್ 7 ರಂದು ಮತ್ತೋರ್ವ ಆರೋಪಿ ಜಾಬೀರ್ ಅಲಿಯಾಸ್ ಜಾಬೀ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ರೂಪಾಯಿ ನಗದು ಮತ್ತು ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಸದ್ರಿ ಸೊತ್ತುಗಳ ಒಟ್ಟು ಮೌಲ್ಯ 23.67 ಲಕ್ಷ ರೂಪಾಯಿಗಳಾಗಿರುತ್ತದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವದಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸದ್ರಿ ಪ್ರಕರಣಗಳನ್ನು ಹೊರತುಪಡಿಸಿದಂತೆ ಆರೋಪಿಗಳು ಉಪ್ಪಿನಂಗಡಿ ಠಾಣೆ, ಬಂಟ್ವಾಳ ನಗರ ಠಾಣೆ ಹಾಗೂ ಬೆಳ್ತಂಗಡಿ‌ ಠಾಣೆಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 5 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದ್ದು ಪೊಲೀಸ್ ತನಿಖೆ ಮುಂದುವರಿದಿದೆ. 

ಈ ಪ್ರಕರಣದ ಪತ್ತೆ ಕಾರ್ಯದಲ್ಲಿ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ  ಶ್ರೀಮತಿ ರೋಹಿಸಿ ಸಿ.ಕೆ ಅವರ ನೇತ್ರತ್ವದಲ್ಲಿ, ಬೆಳ್ತಂಗಡಿ ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ರವಿ ಬಿ.ಎಸ್‌, ಉಪ್ಪಿನಂಗಡಿ ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್‌ ಎಚ್‌.ಇ., ಪೂಂಜಾಲಕಟ್ಟೆ ಠಾಣಾ ಪಿಎಸ್ಸೈ ರಾಜೇಶ್‌ ಕೆ.ವಿ, ಸಿಬ್ಬಂದಿಗಳಾದ ಬೆನ್ನಿಚ್ಚನ್‌, ಸುಂದರ ಶೆಟ್ಟಿ, ವಿಶ್ವನಾಥ್‌ ನಾಯ್ಕ್‌, ಪ್ರವೀಣ್‌ ಮೂರುಗೋಳಿ, ರಾಜೇಶ್‌ ಎನ್‌, ವಿಜಯ್‌ ಕುಮಾರ್‌ ರೈ, ರಾಹುಲ್‌ ರಾವ್‌, ಸಂತೋಷ್‌, ಬಸವರಾಜ್‌, ರಜಿತ್‌, ನಾಗರಾಜ್‌ ರವರು ಭಾಗಿಯಾಗಿದ್ದು, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್‌ ಮತ್ತು ಸಂಪತ್‌ ಅವರು ಸಹಕರಿಸಿರುತ್ತಾರೆ ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕಳ್ಳತನ ಪ್ರಕರಣ ಬೇಧಿಸಿದ ಪೂಂಜಾಲಕಟ್ಟೆ ಪೊಲೀಸರು : ಇಬ್ಬರು ಅಂತರ್ ರಾಜ್ಯ ಖದೀಮರು ಪೊಲೀಸ್ ಬಲೆಗೆ, ಲಕ್ಷಾಂತರ ಮೌಲ್ಯದ ಸೊತ್ತುಗಳು ವಶಕ್ಕೆ Rating: 5 Reviewed By: lk
Scroll to Top