ಬಂಟ್ವಾಳ, ಜೂನ್ 01, 2026 (ಕರಾವಳಿ ಟೈಮ್ಸ್) : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಬಂಟ್ವಾಳದಲ್ಲಿ ಮೇ 28 ರಂದು ರಾತ್ರಿ ವೇಳೆ ಸಂಭವಿಸಿದೆ.
ಗಾಯಗೊಂಡವರನ್ನು ಇಲ್ಲಿನ ನಿವಾಸಿ ವೈ ಮೊಹಮ್ಮದ್ ಎಂದು ಹೆಸರಿಸಲಾಗಿದೆ. ಇವರು ಮೇ 28 ರಂದು ರಾತ್ರಿ 7.50 ರ ವೇಳೆಗೆ ಮನೆ ಎದುರುಗಡೆ ನಿಂತುಕೊಂಡಿದ್ದ ವೇಳೆ ಕಡೂರು-ಬಿ ಸಿ ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೂಂಜಾಲಕಟ್ಟೆ ಕಡೆಯಿಂದ ಬಿ ಸಿ ರೋಡು ಕಡೆಗೆ ಸಾಗಿ ಬಂದ ಕೆಎ70 ಎಚ್6675 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ರಸ್ತೆಗೆಸೆಯಲ್ಪಟ್ಟ ಮೊಹಮ್ಮದ್ ಅವರ ಹಣೆ ಹಾಗೂ ಕೈಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪಡೀಲ್ ಜನಪ್ರಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಗಾಯಾಳುವಿನ ಪುತ್ರಿ ಆಶಿಕಾ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0 comments:
Post a Comment