ಮಂಗಳೂರು, ಜೂನ್ 25, 2026 (ಕರಾವಳಿ ಟೈಮ್ಸ್) : ಎನ್ ಡಿ ಪಿ ಎಸ್ ಪ್ರಕರಣದಲ್ಲಿ ಭಾಗಿಯಾಗಿ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ನಿವಾಸಿ ಮೊಹಮ್ಮದ್ ರಫೀಕ್ (50) ಎಂದು ಹೆಸರಿಸಲಾಗಿದೆ. ಇ ಆಂಡ್ ಎನ್ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 03/2021ರ ಎನ್ ಡಿ ಪಿ ಎಸ್ ಪ್ರಕರಣದಡಿ ಆರೋಪಿ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿ ವಿರುದ್ಧ ವಾರಂಟ್ ಜಾರಿಗೊಳಿಸಿತ್ತು.
ವಾರಂಟ್ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೆÇಲೀಸರು ಆರೋಪಿಯನ್ನು ಜೂನ್ 24ರಂದು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.















0 comments:
Post a Comment