ಅಂಗನವಾಡಿ, ಶಾಲಾ-ಕಾಲೇಜು ನೀರಿನ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸಲು ಹಾಗೂ ನೀರಿನ ಪರೀಕ್ಷೆ ನಡೆಸಲು ಜಿ.ಪಂ. ಸಿಇಒ ಸೂಚನೆ - Karavali Times ಅಂಗನವಾಡಿ, ಶಾಲಾ-ಕಾಲೇಜು ನೀರಿನ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸಲು ಹಾಗೂ ನೀರಿನ ಪರೀಕ್ಷೆ ನಡೆಸಲು ಜಿ.ಪಂ. ಸಿಇಒ ಸೂಚನೆ - Karavali Times

728x90

11 June 2026

ಅಂಗನವಾಡಿ, ಶಾಲಾ-ಕಾಲೇಜು ನೀರಿನ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸಲು ಹಾಗೂ ನೀರಿನ ಪರೀಕ್ಷೆ ನಡೆಸಲು ಜಿ.ಪಂ. ಸಿಇಒ ಸೂಚನೆ

ಮಂಗಳೂರು, ಜೂನ್ 11, 2026 (ಕರಾವಳಿ ಟೈಮ್ಸ್) : ಅಂಗನವಾಡಿಗಳು, ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡಲು ನಿಯಮಿತವಾದ ನೀರಿನ ಪರೀಕ್ಷೆಯನ್ನು ಮಾಡಬೇಕು. ರೋಗಗಳು ಹರಡದಂತೆ ತಡೆಯಲು ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷೆಗಳಿಗೆ ಒಳಪಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಸೂಚಿಸಿದರು. 

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಜೂನ್ 11 ರಂದು ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಟ್ಯಾಂಕ್ ಸ್ವಚ್ಛಗೊಳಿಸುವಿಕೆ ಅತ್ಯಂತ ಅತ್ಯಗತ್ಯವಾಗಿದ್ದು, ಶಾಲೆಗಳಲ್ಲಿನ ನೀರಿನ ಟ್ಯಾಂಕ್ ಗಳನ್ನು ವಿಳಂಬ ಮಾಡದೆ ಕಾಲ ಕಾಲಕ್ಕೆ ಸ್ವಚ್ಛಗೊಳಿಸುವಂತೆ ತಿಳಿಸಿದರು.

ಜಲಜೀವನ್ ಮಿಷನ್ ಸೇರಿದಂತೆ ವಿವಿಧ ನೀರು ಸರಬರಾಜು ಯೋಜನೆಗಳ ಪ್ರಗತಿ ಪರಿಶೀಲಿಸಿದರು.  ಬಾಕಿ ಇರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅವರು ನಿರ್ದೇಶಿಸಿದರು. ನೀರು ಸರಬರಾಜು ಕಾಮಗಾರಿಗಳನ್ನು ನಿರ್ವಹಿಸುವಲ್ಲಿ ಯಾವುದೇ ವಿಳಂಬ ಮಾಡಬಾರದು ಎಂದ ಅವರು, ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿನ ನೀರಿನ ಟ್ಯಾಂಕ್ ಗಳನ್ನು ಶುಚಿಗೊಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸಬೇಕು. ಪ್ರತಿಯೊಂದು ಕುಡಿಯುವ ನೀರಿನ ಮೂಲಗಳಿಂದ ಕಡ್ಡಾಯವಾಗಿ ನೀರಿನ ಮಾದರಿಗಳನ್ನು ಪರೀಕ್ಷೆ ಮಾಡಿಸಬೇಕು ಎಂದರು. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ  ಅವರು ಇದೇ ವೇಳೆ ನಿರ್ದೇಶನ ನೀಡಿದರು. ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಅಂಗನವಾಡಿ, ಶಾಲಾ-ಕಾಲೇಜು ನೀರಿನ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸಲು ಹಾಗೂ ನೀರಿನ ಪರೀಕ್ಷೆ ನಡೆಸಲು ಜಿ.ಪಂ. ಸಿಇಒ ಸೂಚನೆ Rating: 5 Reviewed By: karavali Times
Scroll to Top