ಬಂಟ್ವಾಳ, ಜೂನ್ 01, 2026 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಯತೀಶ್ ಎಂಬವರ ಮೃತದೇಹ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಅಲಾದಿಕೊಟ್ಟಿಗೆ ಎಂಬಲ್ಲಿ ಜೂನ್ 1 ರಂದು ಬೆಳಿಗ್ಗೆ ಪತ್ತೆಯಾಗಿದ್ದು, ಇದೊಂದು ಕೊಲೆ ಎಂಬುದನ್ನು ಕ್ಷಿಪ್ರವಾಗಿ ಪತ್ತೆಹಚ್ಚಿರುವ ಬೆಳ್ತಂಗಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸೋಮವಾರ ಬೆಳಿಗ್ಗೆ ಪೆರ್ನೆ ನಿವಾಸಿ ಯತೀಶ್ (33) ಎಂಬವರ ಮೃತದೇಹದ ಭಾವಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹದಿದಾಡಿದ್ದು, ಈ ಬಗ್ಗೆ ಅವರ ಸಹೋದರ ನಿತಿನ್ (34) ಅವರು ಮೃತದೇಹ ತನ್ನ ಸಹೋದರನದ್ದೆಂದು ಗುರುತಿಸಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು.
ನಿತಿನ್ ಅವರ ದೂರಿನಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸರು ಸ್ಥಳೀಯ ಸೀಸಿ ಟಿವಿ ಫೂಟೇಜುಗಳನ್ನು ಪರಿಶೀಲನೆ ನಡೆಸಿ ಪ್ರಕರಣ ಬೇಧಿಸಿದ್ದು, ಇದೊಂದು ಕೊಲೆ ಎಂಬುದನ್ನು ಕಂಡುಕೊಂಡಿದ್ದಾರೆ. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳಾದ ಬೆಳ್ತಂಗಡಿ-ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ-ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ-ಪಡಂಗಡಿ ನಿವಾಸಿ ಇಬ್ರಾಹಿಮ (54) ಅವರನ್ನು ಬಂಧಿಸಿದ್ದಾರೆ.
ಜೂನ್ 1 ರಂದು ಬೆಳಗ್ಗಿನ ಸಮಯ ಆರೋಪಿಗಳು ಮೃತ ಯತೀಶನಿಗೆ ಹಲ್ಲೆ ಮಾಡುತ್ತಿರುವುದು ಸೀಸಿ ಟಿವಿಯಲ್ಲಿ ಕಂಡುಬಂದಿದ್ದು, ಆರೋಪಿಗಳ ಹಲ್ಲೆಯಿಂದಾಗಿ ಯತೀಶನು ಮೃತಪಟ್ಟಿರುವುದು ಗೊತ್ತಾಗಿದೆ. ಈ ಬಗ್ಗೆ ನಿತಿನ್ ನೀಡಿರುವ ದೂರಿನಂತೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 65/2026, ಕಲಂ 115(2) 103 ಜೊತೆಗೆ 3(5) ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.











0 comments:
Post a Comment