ಸೋಮಂತಡ್ಕ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಧರ್ಮಸ್ಥಳ ಪೊಲೀಸರು - Karavali Times ಸೋಮಂತಡ್ಕ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಧರ್ಮಸ್ಥಳ ಪೊಲೀಸರು - Karavali Times

728x90

4 June 2026

ಸೋಮಂತಡ್ಕ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ, ಜೂನ್ 04, 2026 (ಕರಾವಳಿ ಟೈಮ್ಸ್) : ಅಕ್ರಮ ಜಾನುವಾರು ಸಾಗಾಟ ಬೇಧಿಸಿದ ಧರ್ಮಸ್ಥಳ ಪೊಲೀಸರು ಜಾನುವಾರು ಸಹಿತ ಆರೋಪಿ ಬಂಧಿಸಿದ ಘಟನೆ ಸೋಮಂತಡ್ಕ ಗ್ರಾಮದ ಮಂಜುಶ್ರೀ ಬಸ್ ನಿಲ್ದಾಣದ ಬಳಿ ಜೂನ್ 3 ರಂದು ರಾತ್ರಿ ನಡೆದಿದೆ. 

ಜೂನ್ 3 ರಂದು ರಾತ್ರಿ, ಅಕ್ರಮ ಜಾನುವಾರು ಸಾಗಾಟದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಪಿಎಸ್ಸೈ ಸಮರ್ಥ ಆರ್ ಗಾಣಿಗೇರ ಅವರಿಗೆ ಖಚಿತ ಮಾಹಿತಿ ಬಂದ ಮೇರೆಗೆ, ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದ ವೇಳೆ ಆರೋಪಿ ಬೆಳ್ತಂಗಡಿ ತೋಟತ್ತಾಡಿ ನಿವಾಸಿ ಅನಿಲ್ ಪಿ (34) ಎಂಬಾತ ಯಾವುದೇ ಪೂರ್ವಾನುಮತಿ ದಾಖಲೆಗಳನ್ನು ಹೊಂದದೇ ಪಿಕಪ್ ವಾಹನದಲ್ಲಿ ಒಂದು ಜಾನುವಾರು ಸಾಗಿಸುತ್ತಿರುವುದು ಪತ್ತೆಯಾಗಿದೆ. ಆತನನ್ನು ವಿಚಾರಿಸಿದಾಗ ಸದ್ರಿ ಜಾನುವಾರನ್ನು ರಾಘವೇಂದ್ರ ಭಟ್ (45) ಎಂಬವರಿಂದ ಖರೀದಿಸಿ, ಮಾಂಸ ಮಾಡುವ ಸಲುವಾಗಿ ತಾನು ಥೋಮಸ್ ತೋಟತ್ತಾಡಿ (30) ಮತ್ತು ಕಕ್ಕಿಂಜೆ ಕಬೀರ್ (28) ಎಂಬವರೊಂದಿಗೆ ಸೇರಿ ಸಾಗಿಸುತ್ತಿರುವುದಾಗಿ ತಿಳಿಸಿದ್ದು, ಈ ಬಗ್ಗೆ ಧರ್ಮಸ್ಥಳ  ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸೋಮಂತಡ್ಕ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಧರ್ಮಸ್ಥಳ ಪೊಲೀಸರು Rating: 5 Reviewed By: karavali Times
Scroll to Top