ಜುಲೈ 11 ರಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಿಂಚು, ಸಿಡಿಲು, ಪ್ರಬಲ ಗಾಳಿ ಜೊತೆ ಭಾರೀ ಮಳೆ ನಿರೀಕ್ಷೆ : ಹವಾಮಾನ ಇಲಾಖೆ ಮುನ್ನಚ್ಚರಿಕೆ - Karavali Times ಜುಲೈ 11 ರಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಿಂಚು, ಸಿಡಿಲು, ಪ್ರಬಲ ಗಾಳಿ ಜೊತೆ ಭಾರೀ ಮಳೆ ನಿರೀಕ್ಷೆ : ಹವಾಮಾನ ಇಲಾಖೆ ಮುನ್ನಚ್ಚರಿಕೆ - Karavali Times

728x90

10 July 2026

ಜುಲೈ 11 ರಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಿಂಚು, ಸಿಡಿಲು, ಪ್ರಬಲ ಗಾಳಿ ಜೊತೆ ಭಾರೀ ಮಳೆ ನಿರೀಕ್ಷೆ : ಹವಾಮಾನ ಇಲಾಖೆ ಮುನ್ನಚ್ಚರಿಕೆ

ಬೆಂಗಳೂರು, ಜುಲೈ 10, 2026 (ಕರಾವಳಿ ಟೈಮ್ಸ್) : ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಪ್ರಬಲ ಗಾಳಿಯೊಂದಿಗೆ ಮಳೆಯಾಗಲಿದೆ ಎಂಧು ಭಾರತೀಯ ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ. 

ಐಎಂಡಿ ಮಾಹಿತಿ ಪ್ರಕಾರ ಜುಲೈ 11 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ. ಈ ವೇಳೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಕೆಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಬೇಕು. ನದಿ ಮತ್ತು ಜಲಾಶಯಗಳ ಸಮೀಪ ಹೋಗಬಾರದು. ಜೊತೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರೈತರು ತಮ್ಮ ಬೆಳೆಗಳಿಗೆ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜೊತೆಗೆ ರಸ್ತೆಯಲ್ಲಿ ಪ್ರಯಾಣಿಸುವಾಗ ಮರ ಮತ್ತು ವಿದ್ಯುತ್ ಕಂಬಗಳ ಕೆಳಗೆ ನಿಲ್ಲಬಾರದು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

  • Blogger Comments
  • Facebook Comments

0 comments:

Post a Comment

Item Reviewed: ಜುಲೈ 11 ರಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಿಂಚು, ಸಿಡಿಲು, ಪ್ರಬಲ ಗಾಳಿ ಜೊತೆ ಭಾರೀ ಮಳೆ ನಿರೀಕ್ಷೆ : ಹವಾಮಾನ ಇಲಾಖೆ ಮುನ್ನಚ್ಚರಿಕೆ Rating: 5 Reviewed By: karavali Times
Scroll to Top