ಬಂಟ್ವಾಳ, ಜುಲೈ 14, 2026 (ಕರಾವಳಿ ಟೈಮ್ಸ್) : ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯನ್ನಿಟ್ಟುಕೊಂಡು ಮುನ್ನಡೆಯಬೇಕು. ನಿರಂತರವಾದ ಅಭ್ಯಾಸದಿಂದ ಯಶಸ್ಸು ಗಳಿಸಲು ಸಾಧ್ಯವಿದೆ ಎಂದು ಬಿ ಮೂಡ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಯೂಸುಫ್ ವಿಟ್ಲ ಹೇಳಿದ್ದಾರೆ.
ಕಾಲೇಜು ಸಭಾಂಗಣದಲ್ಲಿ ಜುಲೈ 14 ರಂದು ನಡೆದ ವಿದ್ಯಾರ್ಥಿ-ಪೆÇೀಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉತ್ತಮ ಬೋಧಕವರ್ಗದ ಪರಿಶ್ರಮ, ಮಕ್ಕಳ ಹೆತ್ತವರ ಪೆÇ್ರೀತ್ಸಾಹದಿಂದಾಗಿ ಕಳೆದ ಸಾಲಿನಲ್ಲಿ ಬಿ ಮೂಡ ಸರಕಾರಿ ಪದವಿಪೂರ್ವ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಲು ಸಾಧ್ಯವಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯೊಂದಿಗೂ ಪೈಪೆÇೀಟಿ ನೀಡುವಷ್ಟರ ಮಟ್ಟಿಗೆ ಬೆಳೆದಿರುವುದು ಹೆಮ್ಮೆ ತಂದಿದೆ. ಜಿಲ್ಲೆಯ ವಿವಿಧ ತಾಲೂಕಿನಿಂದಲೂ ವಿದ್ಯಾರ್ಥಿಗಳು ಈ ಸಂಸ್ಥೆಗೆ ಸೇರ್ಪಡೆಯಾಗುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆಯು ಹೆಚ್ಚಾಗಿದೆ ಎಂದರು.
ಸಂಸ್ಥೆಯಲ್ಲಿ ಶಿಸ್ತು ಮತ್ತು ಗುಣಮಟ್ಟದ ಶಿಕ್ಷಣ ಬೋಧನೆಗೆ ಹೆಚ್ಚಿನ ಅದ್ಯತೆ ನೀಡಲಾಗುತ್ತಿದೆ. ಅಶಿಸ್ತನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ, ಮಕ್ಕಳ ಚಟುವಟಿಕೆಯ ಮೇಲೆ ಹೆತ್ತವರು ಕೂಡ ಸದಾ ನಿಗಾ ವಹಿಸಬೇಕು. ವಿದ್ಯಾರ್ಥಿಗಳು ಸಂಸ್ಥೆಯ ನಿಯಮಗಳನ್ನು ಮೀರಿ ವರ್ತಿಸಿದ್ದು ಕಂಡಬಂದಲ್ಲಿ ಅಂತಹ ವಿದ್ಯಾರ್ಥಿಗಳ ವಿರುದ್ದ ಕ್ರಮ ಕೈಗೊಳ್ಳುವುದಕ್ಕೂ ಹಿಂಜರಿಯುವುದಿಲ್ಲ ಎಂದ ಅವರು ಮಕ್ಕಳ ಭವಿಷ್ಯದ ಕುರಿತಂತೆ ಚಿಂತನ, ಮಂಥನ ನಡೆಸುವ ನಿಟ್ಟಿನಲ್ಲಿ ವರ್ಷದಲ್ಲಿ ಒಂದೆರಡು ಬಾರಿ ಪೆÇೀಷಕರ ಸಭೆ ಅಯೋಜಿಸಲಾಗುತ್ತಿದೆ ಎಂದರು.
ಉಪನ್ಯಾಸಕ ವಿನೋದ್ ಮಾತನಾಡಿ, ದಿನದಲ್ಲಿ ಒಂದೆರಡು ತಾಸು ಅಧ್ಯಯನದಲ್ಲಿ ತೊಡಗಿಸಿಕೊಂಡಾಗ ಸಿಇಟಿಯಂತಹ ಪರೀಕ್ಷೆಯನ್ನು ಸುಲಭವಾಗಿ ಬರೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಈಗಿನಿಂದಲೇ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ಉಪನ್ಯಾಸಕರಾದ ಲವಿನಾ ಶಾಂತಿ, ಪುಣ್ಯಾವತಿ, ಪ್ರತಿಭಾ ಭಾಗವಹಿಸಿದ್ದರು. ಉಪನ್ಯಾಸಕರಾದ ಸೌಮ್ಯ ಸ್ವಾಗತಿಸಿ, ಪ್ರಸ್ತಾವನೆಗೈದರು. ಹೇಮಾ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.











0 comments:
Post a Comment