ಬಂಟ್ವಾಳ, ಜುಲೈ 19, 2026 (ಕರಾವಳಿ ಟೈಮ್ಸ್) : ಬಿ ಸಿ ರೋಡು ಬಸ್ ನಿಲ್ದಾಣದಲ್ಲಿ ಜುಲೈ 16 ರಂದು ಚೇತನ್ ಎಂಬ ಅರೋಪಿಯಿಂದ ಹತ್ಯೆಗೀಡಾದ ಕಕ್ಯಪದವು ಸಮೀಪದ ಮೈರ ನಿವಾಸಿ ಯುವತಿ ಲಾವಣ್ಯ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಅವರುಗಳ ನೇತೃತ್ವದ ನಿಯೋಗ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಲಾವಣ್ಯಳ ಹತ್ಯೆ ಅತ್ಯಂತ ನೋವು ಮತ್ತು ಆಘಾತಕಾರಿ ಘಟನೆ ಎಂದು ಖಂಡಿಸಿದ ನಿಯೋಗ ಪ್ರಕರಣದ ಆರೋಪಿಗೆ ಕಾನೂನಿನಡಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರಲ್ಲದೆ ಕುಟುಂಬಕ್ಕೆ ನ್ಯಾಯ ದೊರಕಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ನಿಯೋಗ ಇಂತಹ ದುರ್ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಪೆÇಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತು.
ನಿಯೋಗದಲ್ಲಿ ಜಿ ಪಂ ಮಾಜಿ ಸದಸ್ಯ ಎಂ ತುಂಗಪ್ಪ ಬಂಗೇರ, ಬುಡಾ ಮಾಜಿ ಅಧ್ಯಕ್ಷ ಬಿ ದೇವದಾಸ್ ಶೆಟ್ಟಿ, ಪ್ರಮುಖರಾದ ರಾಮದಾಸ್ ಬಂಟ್ವಾಳ, ಸುರೇಶ್ ಮೈರ, ಚಿದಾನಂದ ಕಕ್ಯ, ವಸಂತ ಉಳಿ, ರಂಜಿತ್ ಮೈರ, ಅಜಿತ್ ಶೆಟ್ಟಿ ಕಾರಿಂಜ, ಸತೀಶ್ ಶೆಟ್ಟಿ ಮದ್ವ, ಯಶವಂತ ಕಜೆಕಾರು, ಶಶಿಕಾಂತ್ ಶೆಟ್ಟಿ ಇದ್ದರು.











0 comments:
Post a Comment