ಬಂಟ್ವಾಳ, ಜುಲೈ 31, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆಗೆ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ (ಬುಡಾ) ದ ಅಧ್ಯಕ್ಷ ಬೇಬಿ ಕುಂದರ್ ಉಮೇದುವಾರಿಕೆ ಸಲ್ಲಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ ಜುಲೈ 28 ರಿಂದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಗೆ ಆಗಮಿಸಿರುವ ಎಐಸಿಸಿ ವೀಕ್ಷಕರೂ, ಕ್ಯಾಲಿಕಟ್ ಶಾಸಕರೂ ಆಗಿರುವ ಜಯಂತ್ ಅವರನ್ನು ಭೇಟಿಯಾದ ಬೇಬಿ ಕುಂದರ್ ಅವರು ಈ ಬಾರಿ ಪಕ್ಷದ ಜಿಲ್ಲಾಧ್ಯಕ್ಷ ಹುದ್ದೆ ನಿರ್ವಹಿಸಲು ಅವಕಾಶ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ.
ಹಿಂದುಳಿದ ವರ್ಗ ಕೋಟಾದಲ್ಲಿ ಬೇಬಿ ಕುಂದರ್ ಅವರು ತಮಗೆ ಪಕ್ಷದ ಜಿಲ್ಲಾಧ್ಯಕ್ಷ ಹುದ್ದೆ ನಿಭಾಯಿಸಲು ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ. ಈ ಹಿಂದೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು ಮಾಜಿ ಸಚಿವ ಬಿ ರಮಾನಾಥ ರೈ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು.
ಬ್ಯಾಂಕ್ ಅಧಿಕಾರಿಯಾಗಿದ್ದ ಇವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ರಾಜಕೀಯ ಪ್ರವೇಶ ಮಾಡಿದ್ದಾರೆ. ಹಿರಿಯ ಕಬಡ್ಡಿ ಪಟುವೂ ಆಗಿರುವ ಇವರು ಅಮೆಚೂರು ಕಬಡ್ಡಿ ಎಸೋಸಿಯೇಶನ್, ಬಿಲ್ಲವ ಮಹಾಮಂಡಲ ಸಹಿತ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡವರು. ಈ ಹಿನ್ನಲೆಯಲ್ಲಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷಗಿರಿ ನೀಡಿ ಪಕ್ಷ ಸಂಘಟನೆಗೆ ಅವಕಾಶ ನೀಡುವಂತೆ ಅವರು ಪಕ್ಷದ ವೀಕ್ಷಕರಿಗೆ ಉಮೇದುವಾರಿಕೆ ಸಲ್ಲಿಸಿದ್ದಾರೆ.











0 comments:
Post a Comment