ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕಿಗೆ ವಂಚಿಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳು ಕಡಬ ಪೊಲೀಸರ ವಶಕ್ಕೆ - Karavali Times ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕಿಗೆ ವಂಚಿಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳು ಕಡಬ ಪೊಲೀಸರ ವಶಕ್ಕೆ - Karavali Times

728x90

6 July 2026

ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕಿಗೆ ವಂಚಿಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳು ಕಡಬ ಪೊಲೀಸರ ವಶಕ್ಕೆ

ಕಡಬ, ಜುಲೈ 06, 2026 (ಕರಾವಳಿ ಟೈಮ್ಸ್) : ಚಿನ್ನಾಭರಣಗಳನ್ನು ಹೆಚ್ಚು ತೂಕ ಮಾಡುವಂತೆ ಮಾಡಿ ಬ್ಯಾಂಕಿನಲ್ಲಿ ಅಡವಿಟ್ಟು ಬ್ಯಾಂಕಿಗೆ ವಂಚಿಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ ಘಟನೆ ಕಡಬ ಪೇಟೆಯಲ್ಲಿ ಜುಲೈ 3 ರಂದು ನಡೆದಿದೆ. 

ಬಂಧಿತ ಆರೋಪಿಗಳನ್ನು ಉಪ್ಪಿನಂಗಡಿ ನಿವಾಸಿ ಮಹಮ್ಮದ್ ಫಾಯಿಝ್ (20) ಹಾಗೂ ಬಂಟ್ವಾಳ ಕಸಬಾ ನಿವಾಸಿ ಮೊಹಮ್ಮದ್ ಮುರ್ಷಿದ್ (45) ಎಂದು ಹೆಸರಿಸಲಾಗಿದೆ. ಜುಲೈ 3 ರಂದು ಸಂಜೆ ಕಡಬ ಪೇಟೆಯಲ್ಲಿ ಇಬ್ಬರು ವ್ಯಕ್ತಿಗಳು ಸಂಶಯಾಸ್ಪದವಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಕಡಬ ಪೆÇಲೀಸರು ಸ್ಥಳಕ್ಕೆ ತೆರಳಿ ಅವರುಗಳನ್ನು ವಿಚಾರಿಸಿದಾಗ, ಅವರುಗಳು ಬ್ಯಾಂಕಿನಲ್ಲಿ ಸುಮಾರು 120 ಗ್ರಾಂ ಚಿನ್ನವನ್ನು ಅಡವಿಡಲು ಬಂದಿರುವುದಾಗಿ ತಿಳಿಸಿದ್ದಾರೆ. ಅವರುಗಳ ವರ್ತನೆಯಿಂದ ಸಂಶಯಗೊಂಡು ಹೆಚ್ಚಿನ ವಿಚಾರಣೆಗಾಗಿ ಠಾಣೆಗೆ ಕರೆತಂದು ಅವರ ಬಳಿಯಿರುವ ಆಭರಣದ ಬಗ್ಗೆ ವಿಚಾರಿಸಿದಾಗ, ಈ ಬಗ್ಗೆ ಯಾವುದೇ ದಾಖಲಾತಿಯನ್ನು ತೋರಿಸದೇ ಸಮಂಜಸ ಮಾಹಿತಿ ನೀಡದಿದ್ದು, ವಿಚಾರಣೆಯ ವೇಳೆ ಸದ್ರಿ ಆಭರಣಗಳನ್ನು ಹೆಚ್ಚು ತೂಕ ಬರುವಂತೆ ಮಾಡಿ ಬ್ಯಾಂಕಿನಲ್ಲಿ ಅಡವಿಟ್ಟು ಬ್ಯಾಂಕಿಗೆ ಮೋಸ ಮಾಡಿ ಹಣ ಮಾಡುವ ಉದ್ದೇಶದಿಂದ ಬಂದಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಕಡಬ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 83/2026, ಕಲಂ 318(4), 62 ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕಿಗೆ ವಂಚಿಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳು ಕಡಬ ಪೊಲೀಸರ ವಶಕ್ಕೆ Rating: 5 Reviewed By: karavali Times
Scroll to Top