ಬಂಟ್ವಾಳ, ಜುಲೈ 30, 2026 (ಕರಾವಳಿ ಟೈಮ್ಸ್) : ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಹಾಗೂ ಬಂಟ್ವಾಳ-ವಿದ್ಯಾಗಿರಿ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜುಲೈ 29 ರಂದು ನಡೆಯಿತು.
ಪಂದ್ಯಾಟ ಉದ್ಘಾಟಿಸಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪ್ಪ ಎಲ್ ಬಿ ಮಾತನಾಡಿ, ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಕ್ರೀಡೆಯು ಪ್ರಮುಖ ಪಾತ್ರವಹಿಸುತ್ತದೆ. ಕಲಿಕೆಯ ಜೊತೆಗೆ ಕ್ರೀಡೆಯು ಅತೀ ಮುಖ್ಯ ಎಂದರು.
ಮುಖ್ಯ ಅಥಿತಿಗಳಾಗಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಆಶಾ ನಾಯಕ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ರೈ ಕೆ, ಶಿಕ್ಷಣ ಸಂಯೋಜಕ ರಮಾನಂದ, ಪೊಳಲಿ ಸರಕಾರಿ ಪ್ರೌಢಶಾಲಾ ನೋಡಲ್ ಶಿಕ್ಷಕ ಜಯಂತ್, ಎಸ್ ವಿ ಎಸ್ ದೇವಳ ಶಾಲಾ ನೋಡಲ್ ಶಿಕ್ಷಕ ಚಂದ್ರಹಾಸ ಶೆಟ್ಟಿ, ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕ ಹರಿಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚೈತ್ರ ಶೆಟ್ಟಿ, ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಕಿ ಶ್ರೀಮತಿ ವೀಣಾ ದೇವಾಡಿಗ ಭಾಗವಹಿಸಿದ್ದರು.
ಕೂಟದಲ್ಲಿ ಸುಮಾರು 12 ತಂಡಗಳು ಮೂರು ವಿಭಾಗದಲ್ಲಿ ಭಾಗವಹಿಸಿದ್ದು, ಎಸ್ ವಿ ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ, ಎಸ್ ವಇ ಎಸ್ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿತು. ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಎಸ್ ವಿ ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಪಡೆಯಿತು.
ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಎಸ್ ವಿ ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ಪ್ರಥಮ, ಮೊಡಂಕಾಪು ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿತು. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ ಪಡೆದರೆ, ಅಳಿಕೆ ಶ್ರೀ ಸತ್ಯಸಾಯಿ ಸೇವಾ ಕೇಂದ್ರದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡರು.
ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಶ್ ಕುಮಾರ್ ಸ್ವಾಗತಿಸಿ, ಶ್ರೀಮತಿ ಪ್ರತೀಕ್ಷಾ ಕುಮಾರಿ ವಂದಿಸಿದರು. ಸಹ ಶಿಕ್ಷಕಿ ಶ್ರೀಮತಿ ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.











0 comments:
Post a Comment