ಬಸ್ಸಿನಲ್ಲಿ ಗುಪ್ತಾಂಗ ಪ್ರದರ್ಶಿಸಿ ಅಸಭ್ಯ ವರ್ತನೆ : ಬಸ್ ಕಂಡಕ್ಟರ್ ಬಂಧನ - Karavali Times ಬಸ್ಸಿನಲ್ಲಿ ಗುಪ್ತಾಂಗ ಪ್ರದರ್ಶಿಸಿ ಅಸಭ್ಯ ವರ್ತನೆ : ಬಸ್ ಕಂಡಕ್ಟರ್ ಬಂಧನ - Karavali Times

728x90

11 July 2026

ಬಸ್ಸಿನಲ್ಲಿ ಗುಪ್ತಾಂಗ ಪ್ರದರ್ಶಿಸಿ ಅಸಭ್ಯ ವರ್ತನೆ : ಬಸ್ ಕಂಡಕ್ಟರ್ ಬಂಧನ

 ಮಂಗಳೂರು, ಜುಲೈ 11, 2026 (ಕರಾವಳಿ ಟೈಮ್ಸ್) : ಬಸ್ಸಿನಲ್ಲಿ ಗುಪ್ತಾಂಗ ಪ್ರದರ್ಶಿಸಿ ಅಸಭ್ಯ ವರ್ತನೆ ತೋರಿದ ಬಸ್ ನಿರ್ವಾಹಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೂಲತಃ ಉಪ್ಪಿನಂಗಡಿ-ಕಲ್ಲೇರಿ ನಿವಾಸಿ, ಪ್ರಸ್ತುತ ಕರ್ವೇಲು ಬಾಡಿಗೆ ಮನೆಯಲ್ಲಿ ವಾಸವಾಗಿರುವ ಅಬುಸಾಲಿ ಎಂಬವರ ಪುತ್ರ ಇರ್ಫಾನ್ (32) ಎಂದು ಹೆಸರಿಸಲಾಗಿದೆ.

ಆರೋಪಿಯು ಮಂಗಳೂರು-ವಿಟ್ಲ ಮಾರ್ಗವಾಗಿ ಸಂಚರಿಸುವ ಸೆಲೆನ ಖಾಸಗಿ ಬಸ್ಸಿನ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಜುಲೈ ರಂದು ಸಂಜೆ ಸುಮಾರು 5 ಗಂಟೆಗೆ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿರಿಸಿಕೊಂಡು ಬಸ್ಸಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶನ ಮಾಡಿ ಅಸಭ್ಯವಾದ ಸನ್ನೆಯನ್ನು ಮಾಡಿ ಹಿಂದಿನ ಸೀಟಿಗೆ ಬಾ ಎಂದು ವಿದ್ಯಾರ್ಥಿನಿಯರನ್ನು ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. 

ಆರೋಪಿ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜುಲೈ 10 ರಂದು ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಬಸ್ಸಿನಲ್ಲಿ ಗುಪ್ತಾಂಗ ಪ್ರದರ್ಶಿಸಿ ಅಸಭ್ಯ ವರ್ತನೆ : ಬಸ್ ಕಂಡಕ್ಟರ್ ಬಂಧನ Rating: 5 Reviewed By: lk
Scroll to Top