ಬೋಳಂಗಡಿಯಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ : ಗಂಭೀರ ಗಾಯಗೊಂಡ ಬೈಕ್ ಸವಾರ ಮೃತ್ಯು - Karavali Times ಬೋಳಂಗಡಿಯಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ : ಗಂಭೀರ ಗಾಯಗೊಂಡ ಬೈಕ್ ಸವಾರ ಮೃತ್ಯು - Karavali Times

728x90

5 July 2026

ಬೋಳಂಗಡಿಯಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ : ಗಂಭೀರ ಗಾಯಗೊಂಡ ಬೈಕ್ ಸವಾರ ಮೃತ್ಯು

ಬಂಟ್ವಾಳ, ಜುಲೈ 05, 2026 (ಕರಾವಳಿ ಟೈಮ್ಸ್) : ತಾಲೂಕಿನ ಕಲ್ಲಡ್ಕ ಸಮೀಪದ ಬೋಳಂಗಡಿ ನರಹರಿ ಪರ್ವತ ಬಳಿ ಭಾನುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃಪಟ್ಟಿದ್ದಾರೆ. 

ಮೃತ ಬೈಕ್ ಸವಾರನನ್ನು ಪುತ್ತೂರು ನಿವಾಸಿ ಎನ್ನಲಾಗಿದ್ದು, ಅಶೋಕ್ (34) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಾರುತಿ ಕಾರು ಹಾಗೂ ಬೈಕ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. 

ಪ್ರದೀಪ್ ಡಿಸೋಜ ಎಂಬವರು ಬಿ ಸಿ ರೋಡು ಕಡೆಗೆ ಚಲಾಯಿಸುತ್ತಿದ್ದ ಕಾರಿಗೆ ವಿರುದ್ದ ದಿಕ್ಕಿನಿಂದ ಒನ್ ವೇ ನಿಯಮ ಉಲ್ಲಂಘಿಸಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಭೀಕರತೆಗೆ ಕಾರು ಹಾಗೂ ಬೈಕ್ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿದೆ. 

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅಶೋಕ್ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬೋಳಂಗಡಿಯಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ : ಗಂಭೀರ ಗಾಯಗೊಂಡ ಬೈಕ್ ಸವಾರ ಮೃತ್ಯು Rating: 5 Reviewed By: karavali Times
Scroll to Top