ಕಾಲೇಜಿಗೆ ತೆರಳಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ಅಪ್ರಾಪ್ತ ಬಾಲಕಿಗೆ ಯದ್ವಾತದ್ವಾ ಇರಿದ ಆರೋಪಿ : ಬಾಲಕಿ ಗಂಭೀರ, ಆರೋಪಿ ಪೊಲೀಸ್ ಠಾಣೆಗೆ ಶರಣು - Karavali Times ಕಾಲೇಜಿಗೆ ತೆರಳಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ಅಪ್ರಾಪ್ತ ಬಾಲಕಿಗೆ ಯದ್ವಾತದ್ವಾ ಇರಿದ ಆರೋಪಿ : ಬಾಲಕಿ ಗಂಭೀರ, ಆರೋಪಿ ಪೊಲೀಸ್ ಠಾಣೆಗೆ ಶರಣು - Karavali Times

728x90

6 July 2026

ಕಾಲೇಜಿಗೆ ತೆರಳಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ಅಪ್ರಾಪ್ತ ಬಾಲಕಿಗೆ ಯದ್ವಾತದ್ವಾ ಇರಿದ ಆರೋಪಿ : ಬಾಲಕಿ ಗಂಭೀರ, ಆರೋಪಿ ಪೊಲೀಸ್ ಠಾಣೆಗೆ ಶರಣು

 ಬಂಟ್ವಾಳ, ಜುಲೈ 06, 2026 (ಕರಾವಳಿ ಟೈಮ್ಸ್) : ಕಾಲೇಜಿಗೆ ತೆರಳಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ಅಪ್ರಾಪ್ತ ಬಾಲಕಿಗೆ ಯುವಕನೋರ್ವ ಚೂರಿಯಿಂದ ಇರಿದು ಬಳಿಕ ಪೊಲೀಸ್ ಠಾಣೆಗೆ ಶರಣಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೋಂತಿಮಾರು ಬಸ್ ನಿಲ್ದಾಣದಲ್ಲಿ ಜುಲೈ 6 ರಂದು ಬೆಳಿಗ್ಗೆ ಸಂಭವಿಸಿದೆ. 

ಜುಲೈ 6 ರಂದು ಬೆಳಿಗ್ಗೆ ಸುಮಾರು 8.45 ಗಂಟೆಗೆ 17 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯು ಮೊಂತಿಮಾರು ಬಸ್ ನಿಲ್ದಾಣದ ಬಳಿ ಕಾಲೇಜಿಗೆ ತೆರಳಲು ನಿಂತಿದ್ದಾಗ, ಸ್ಥಳಕ್ಕೆ ಬಂದ ಆರೋಪಿ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂಬಾತ ಮಚ್ಚಿನಿಂದ ಬಾಲಕಿಯ ತಲೆ ಹಾಗೂ ಕೈಗೆ ಹಲ್ಲೆ ಮಾಡಿರುತ್ತಾನೆ. ಕೃತ್ಯ ನಡೆಸಿದ ಬಳಿಕ ಆರೋಪಿಯು ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಇರಿತದಿಂದ ಗಂಭೀರ ಗಾಯಗೊಂಡಿರುವ ಬಾಲಕಿಯನ್ನು ಸ್ಥಳೀಯರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಸ್ತುತ  ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಪಿಯ ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕಾಲೇಜಿಗೆ ತೆರಳಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ಅಪ್ರಾಪ್ತ ಬಾಲಕಿಗೆ ಯದ್ವಾತದ್ವಾ ಇರಿದ ಆರೋಪಿ : ಬಾಲಕಿ ಗಂಭೀರ, ಆರೋಪಿ ಪೊಲೀಸ್ ಠಾಣೆಗೆ ಶರಣು Rating: 5 Reviewed By: karavali Times
Scroll to Top