ಮ್ಯಾಟ್ರಿಮೋನಿ ಆಪ್ ಮೂಲಕ ಪರಿಚಯವಾದ ಮಹಿಳೆಯಿಂದ ಲಕ್ಷಾಂತರ ರೂಪಾಯಿ ವಂಚನೆ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಮ್ಯಾಟ್ರಿಮೋನಿ ಆಪ್ ಮೂಲಕ ಪರಿಚಯವಾದ ಮಹಿಳೆಯಿಂದ ಲಕ್ಷಾಂತರ ರೂಪಾಯಿ ವಂಚನೆ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

21 July 2026

ಮ್ಯಾಟ್ರಿಮೋನಿ ಆಪ್ ಮೂಲಕ ಪರಿಚಯವಾದ ಮಹಿಳೆಯಿಂದ ಲಕ್ಷಾಂತರ ರೂಪಾಯಿ ವಂಚನೆ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ, ಜುಲೈ 21, 2026 (ಕರಾವಳಿ ಟೈಮ್ಸ್) : ಮ್ಯಾಟ್ರಿಮೋನಿ ಎಂಬ ಆಪ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ಬಗ್ಗೆ ಬೆಳ್ತಂಗಡಿ ನಿವಾಸಿ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದು, ಇವರು ಬಿಸಿನೆಸ್ ಮಾಡುತ್ತಿದ್ದು, ಇವರಿಗೆ 2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಎಂಬ ಆಪ್ ಮೂಲಕ ಆರೋಪಿತೆ ಅನಿಷಾ ಪಾಲನ್ನ (35) ಎಂಬಾಕೆಯು ಪರಿಚಯವಾಗಿ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದರು. 2024 ರ ಸೆಪ್ಟೆಂಬರ್ 26 ರಿಂದ 2025 ಜನವರಿ  20ರ ಅವಧಿಯಲ್ಲಿ ಸದ್ರಿ ಆರೋಪಿತೆಯು ದೂರುದಾರ ವ್ಯಕ್ತಿಗೆ ಕರೆ ಮಾಡಿ ಬೇರೆ ಬೇರೆ ಕಾರಣಗಳನ್ನು ನೀಡಿ, ಹಂತ ಹಂತವಾಗಿ, ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 87,22,710/- ರೂಪಾಯಿ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿರುತ್ತಾರೆ. ಪ್ರಸ್ತುತ ಆರೋಪಿತೆಯು ಮೊಬೈಲ್ ಸಂಪರ್ಕಕ್ಕೆ ಸಿಗದೇ, ಹಣವನ್ನು ವಾಪಸ್ ನೀಡದೇ ವಂಚನೆ ಎಸಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 78/2026 ಕಲಂ 318(4) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮ್ಯಾಟ್ರಿಮೋನಿ ಆಪ್ ಮೂಲಕ ಪರಿಚಯವಾದ ಮಹಿಳೆಯಿಂದ ಲಕ್ಷಾಂತರ ರೂಪಾಯಿ ವಂಚನೆ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top