ಮಂಗಳೂರು, ಜುಲೈ 11, 2026 (ಕರಾವಳಿ ಟೈಮ್ಸ್) : ಹುಡುಗಿಯೊಬ್ಬಳ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ಮಧ್ಯೆ ಘರ್ಷಣೆ ನಡೆದಿದ್ದು, ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.
ಈ ಬಗ್ಗೆ ಕಡಬ ನಿವಾಸಿ ಮೋನಿಷ್ (21) ಎಂಬವರು ದೂರು ನೀಡಿದ್ದು, ಇವರು ಜುಲೈ 10 ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿರುವಾಗ ಕಡಬ ಗ್ರಾಮದ ಕಾಲೇಜು ರಸ್ತೆಯ ಜಂಕ್ಷನ್ ಬಳಿಯಲ್ಲಿ ಶರತ್, ದೀಪಕ್ ಮತ್ತು ವಿಶ್ವನಾಥ ಎಂಬವರುಗಳು ಹುಡುಗಿಯೊಬ್ಬಳ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ, ತಡೆದು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಕಡಬ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 84/2026, ಕಲಂ 126(2), 118(1), 115(2), 352, 351(2), ಆರ್/ಡಬ್ಲ್ಯು 3(5) ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ರುಪ್ಪಾಡಿ ನಿವಾಸಿ ದೀಪಕ್ (33) ಎಂಬವರು ಪ್ರತಿ ದೂರು ನೀಡಿದ್ದು, ತನ್ನನ್ನು ಮೋನಿಷ್ ಎಂಬವರು ತಡೆದು ನಿಲ್ಲಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುತ್ತಾರೆ ಎಂಬುದಾಗಿ ನೀಡಿದ ಪ್ರತಿ ದೂರಿನಂತೆ ಕಡಬ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 85/2026 ಕಲಂ 126(2), 118(1), 115(2), 352, 351(2) ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ. ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.















0 comments:
Post a Comment