ಮಂಗಳೂರು, ಜುಲೈ 04, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 104-2025, ಕಲಂ 66(ಸಿ), 66(ಡಿ) ಐಟಿ ಕಾಯ್ದೆ-2008 ಮತ್ತು ಕಲಂ 126 (2), 308(6), 318(4), 319(2), 3(5) ಬಿ ಎನ್ ಎಸ್ (ಡಿಜಿಟಲ್ ಅರೆಸ್ಟ್ ಪ್ರಕರಣ) ಪ್ರಕರಣದಲ್ಲಿ ಸೈಬರ್ ಅಪರಾಧಕ್ಕೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು, ಸೈಬರ್ ವಂಚನೆಯ ಹಣದ ವಹಿವಾಟಿಗೆ ನೀಡಿ ಸಹಕರಿಸುತ್ತಿದ್ದ ಆರೋಪಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಎಂಬಾತನನ್ನು ಜುಲೈ 3 ರಂದು ಜಿಲ್ಲಾ ಸೈಬರ್ ಅಪರಾಧ ಠಾಣೆಯ ಪೆÇಲೀಸರು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ.
ವಿಚಾರಣೆಯ ವೇಳೆ ಸದ್ರಿ ಆರೋಪಿಯ ವಿರುದ್ಧ ವಿಟ್ಲ ಪೆÇಲೀಸ್ ಠಾಣೆಯಲ್ಲಿ 1 ಪ್ರಕರಣ (ಅ.ಕ್ರ 180/2022) ಸೇರಿದಂತೆ ರಾಜ್ಯದ ಬೇರೆ ಬೇರೆ ಠಾಣೆಗಳಲ್ಲಿ ಒಟ್ಟು 4 ಪ್ರಕರಣಗಳು ದಾಖಲಾಗಿರುವ ಬಗ್ಗೆ ಹಾಗೂ ಆರೋಪಿಯು ಹಲವು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ದಸ್ತಗಿರಿಗೆ ಸಿಗದೇ ತಲೆ ಮರೆಸಿಕೊಂಡಿರುವುದು ತಿಳಿದುಬಂದಿರುತ್ತದೆ.















0 comments:
Post a Comment