ಜಿಲ್ಲಾಡಳಿತದ ಆದೇಶ ಧಿಕ್ಕರಿಸಿ ತರಗತಿ ನಡೆಸಿದರೆ ಕಾನೂನು ಕ್ರಮ : ಖಾಸಗಿ ಶಾಲಾ-ಕಾಲೇಜುಗಳಿಗೆ ಡೀಸಿ ಎಚ್ಚರಿಕೆ - Karavali Times ಜಿಲ್ಲಾಡಳಿತದ ಆದೇಶ ಧಿಕ್ಕರಿಸಿ ತರಗತಿ ನಡೆಸಿದರೆ ಕಾನೂನು ಕ್ರಮ : ಖಾಸಗಿ ಶಾಲಾ-ಕಾಲೇಜುಗಳಿಗೆ ಡೀಸಿ ಎಚ್ಚರಿಕೆ - Karavali Times

728x90

1 July 2026

ಜಿಲ್ಲಾಡಳಿತದ ಆದೇಶ ಧಿಕ್ಕರಿಸಿ ತರಗತಿ ನಡೆಸಿದರೆ ಕಾನೂನು ಕ್ರಮ : ಖಾಸಗಿ ಶಾಲಾ-ಕಾಲೇಜುಗಳಿಗೆ ಡೀಸಿ ಎಚ್ಚರಿಕೆ

ಮಂಗಳೂರು, ಜುಲೈ 01, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 2 ರಂದು ಗುರುವಾರ ಜಿಲ್ಲೆಯ 12ನೇ ತರಗತಿಯವರೆಗಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಆದರೆ ಕೆಲವು ಖಾಸಗಿ ಶಾಲೆಗಳು, ಕಾಲೇಜುಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು ತರಗತಿಗಳನ್ನು ನಡೆಸುತ್ತಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸುತ್ತಿರುವುದು ಕಂಡುಬಂದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಜಿಲ್ಲಾಡಳಿತದ ಆದೇಶ ಧಿಕ್ಕರಿಸಿ ತರಗತಿ ನಡೆಸಿದರೆ ಕಾನೂನು ಕ್ರಮ : ಖಾಸಗಿ ಶಾಲಾ-ಕಾಲೇಜುಗಳಿಗೆ ಡೀಸಿ ಎಚ್ಚರಿಕೆ Rating: 5 Reviewed By: karavali Times
Scroll to Top