ಮಂಗಳೂರು : ಮಾದಕ ವಸ್ತುಗಳ ವಿರುದ್ದ ಜಾಗೃತಿ ಅಭಿಯಾನ ಹಾಗೂ ಪ್ರತಿಜ್ಞೆ ಸ್ವೀಕಾರ - Karavali Times ಮಂಗಳೂರು : ಮಾದಕ ವಸ್ತುಗಳ ವಿರುದ್ದ ಜಾಗೃತಿ ಅಭಿಯಾನ ಹಾಗೂ ಪ್ರತಿಜ್ಞೆ ಸ್ವೀಕಾರ - Karavali Times

728x90

30 July 2026

ಮಂಗಳೂರು : ಮಾದಕ ವಸ್ತುಗಳ ವಿರುದ್ದ ಜಾಗೃತಿ ಅಭಿಯಾನ ಹಾಗೂ ಪ್ರತಿಜ್ಞೆ ಸ್ವೀಕಾರ

ಮಂಗಳೂರು, ಜುಲೈ 30, 2026 (ಕರಾವಳಿ ಟೈಮ್ಸ್) : ರಾಜ್ಯ ಸರ್ಕಾರದ “ಆಪರೇಶನ್ ರೈಝ್” ಹಾಗೂ “ಬೇಡ ಬ್ರೊ” ಉಪಕ್ರಮಗಳಡಿ ಮಾದಕ ವಸ್ತುಗಳ ವಿರುದ್ಧ ರಾಜ್ಯವ್ಯಾಪಿ ಜಾಗೃತಿ ಅಭಿಯಾನದ ಅಂಗವಾಗಿ ಮಂಗಳೂರು ನಗರ ಪೆÇಲೀಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಜಾಗೃತಿ ಕಾರ್ಯಕ್ರಮ ಜುಲೈ 30 ರಂದು ನಡೆಯಿತು. 

ಕಾರ್ಯಕ್ರಮವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಡಾ ಯು.ಟಿ. ಖಾದರ್ ಫರೀದ್ ಉದ್ಘಾಟಿಸಿದರು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. 

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಿಂದ ಸುಮಾರು 2,000 ವಿದ್ಯಾರ್ಥಿಗಳು, ಶಾಲಾ ಮುಖ್ಯಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಮಾದಕ ವಸ್ತುಗಳ ವಿರುದ್ಧ ಪ್ರತಿಜ್ಞೆ ಸ್ವೀಕರಿಸಿದರು. ವಿವಿಧ ಇಲಾಖೆಗಳ ತಜ್ಞರು ಭಾಗವಹಿಸಿ ಪ್ಯಾನಲ್ ಡಿಸ್ಕಶನ್  ಮೂಲಕ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ, ವ್ಯಸನದಿಂದ ದೂರವಿರುವಂತೆ ಸಂದೇಶ ನೀಡಿದರು. 

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು : ಮಾದಕ ವಸ್ತುಗಳ ವಿರುದ್ದ ಜಾಗೃತಿ ಅಭಿಯಾನ ಹಾಗೂ ಪ್ರತಿಜ್ಞೆ ಸ್ವೀಕಾರ Rating: 5 Reviewed By: karavali Times
Scroll to Top