ಬಂಟ್ವಾಳ, ಜುಲೈ 13, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವಿಸಿದ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ಎಂಬಲ್ಲಿ ಜುಲೈ 11 ರಂದು ರಾತ್ರಿ ವೇಳೆ ನಡೆದಿದೆ.
ಬಂಧಿತ ಆರೋಪಿಯನ್ನು ಸ್ಥಳೀಯ ನಿವಾಸಿ ಮಹಮ್ಮದ್ ಜಲೀಲ್ (37) ಎಂದು ಹೆಸರಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್ಸೈ ಸಂದೀಪ್ ಕುಮಾರ್ ಶೆಟ್ಟಿ ಅವರು ಸಿಬ್ಬಂದಿಗಳಾದ ಕೃಷ್ಣ ನಾಯ್ಕ, ಆದರ್ಶ, ಅಜಯ್ ಕುಮಾರ್ ಹಾಗೂ ಗವಿಸಿದ್ದಪ್ಪ ಅವರೊಂದಿಗೆ ಜುಲೈ 11 ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಮಾದಕ ವಸ್ತು ಸೇವಿಸಿದ ಜಲೀಲ್ ಅವರನ್ನು ವಿಚಾರಿಸಿದಾಗ ಸಮರ್ಪಕ ಉತ್ತರ ನೀಡಲು ವಿಫಲನಾಗಿದ್ದಾನೆ. ಈತನನ್ನು ಮತ್ತಷ್ಟು ವಿಚಾರಿಸಿದಾಗ ಅಮಲು ಪದಾರ್ಥ ಸೇವಿಸಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0 comments:
Post a Comment