ಮಂಗಳೂರು, ಜುಲೈ 03, 2026 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಅವರು ಜುಲೈ 4 ರಿಂದ 6 ರವರೆಗೆ ಕೈಗೊಳ್ಳುವ ಪ್ರವಾಸದ ವಿವರ :
ಜುಲೈ 4 ರಂದು ಬೆಳಿಗ್ಗೆ 10.30ಕ್ಕೆ ಕಾರವಾರದಲ್ಲಿ ಹಾಗೂ ಸಂಜೆ 4.30ಕ್ಕೆ ಉಡುಪಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ರಾತ್ರಿ 8.15ಕ್ಕೆ ಮಂಗಳೂರಿನ ಐ.ಎಮ್.ಎ ಹಾಲ್‍ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜುಲೈ 5 ರಂದು ಬೆಳಿಗ್ಗೆ 10 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 12.30ಕ್ಕೆ ಮಂಗಳೂರಿನಿಂದ ಕೊಡಗು ಜಿಲ್ಲೆಗೆ ತೆರಳಿ, ವಾಸ್ತವ್ಯ.
ಜುಲೈ 6 ರಂದು ಬೆಳಿಗ್ಗೆ 10.30ಕ್ಕೆ ಸುಳ್ಯದಲ್ಲಿ ಸ್ಥಳೀಯ ಕಾರ್ಯಕ್ರಮ, ಸಂಜೆ 5 ಗಂಟೆಗೆ ಮಂಗಳೂರಿನಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.















0 comments:
Post a Comment