ಬಂಟ್ವಾಳ, ಜುಲೈ 01, 2026 (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಮಳೆ ಹಾನಿ ಪ್ರಕರಣಗಳು ವರದಿಯಾಗಿದೆ. ಅನಂತಾಡಿ ಗ್ರಾಮದ ಗೋಳಿಕಟ್ಟೆ ನಿವಾಸಿ ಶ್ರೀಮತಿ ಸೀತಾ ಕೋಂ ರಮೇಶ ನಾಯ್ಕ ಅವರ ಮನೆಗೆ ಮರ ಬಿದ್ದು ಹಾನಿ ಸಂಭವಿಸಿದೆ. ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ಚಂದ್ರಶೇಖರ ಬಿನ್ ಬಾಬು ಶೆಟ್ಟಿ ಅವರ ಮನೆಗೆ ಮರ ಬಿದ್ದು ಹಾನಿಯಾಗಿದೆ. ಮನೆ ಮಂದಿ ಪ್ರಸ್ತುತ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೊಂದಿದ್ದಾರೆ.
1 July 2026
- Blogger Comments
- Facebook Comments
Subscribe to:
Post Comments (Atom)
















0 comments:
Post a Comment