ಮಂಗಳೂರು, ಜುಲೈ 17, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರದ, ಉರ್ವ ಮಾರ್ಕೆಟ್ ಬಳಿ ಮಠದಕಣಿಯ ಮನೆಯಲ್ಲಿ ಜುಲೈ 11 ರಂದು ನಡೆದ ಕಳವು ಕೃತ್ಯ ಬೇಧಿಸಿದ ಬರ್ಕೆ ಪೊಲೀಸರು ನೇಪಾಳ ಮೂಲದ ಮೂವರು ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ನೇಪಾಳ ಮೂಲದ ತಿಲಕ್ ಕುಮಾರ್ ಖಡ್ಕ ಅಲಿಯಾಸ್ ತಿಲಕ್ ಖಡ್ಕ (36), ಅಶೋಕ್ ರಾಜ್ ಅಲಿಯಾಸ್ ಅಶೋಕ್ ಸಿಂಗ್ ಅಲಿಯಾಸ್ ಅಶೋಕ್ ಸಿಂಗ್ ಠಾಕುರಿ (33) ಹಾಗೂ ದಿಪೆಂದರ್ ರಸೈಲಿ (25) ಎಂದು ಗುರುತಿಸಲಾಗಿದೆ.
ಜುಲೈ 11 ರಂದು ಸಂಜೆ 5.30ಕ್ಕೆ ಗಂಟೆಗೆ ಮನೆ ಮಂದಿ ಮನೆಗೆ ಬೀಗ ಹಾಕಿ ಬಂಟ್ವಾಳ ತಾಲೂಕಿನ, ವಿಟ್ಲ ಕಡಂಬು ಎಂಬಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದು ಜುಲೈ 12 ರಂದು ಬೆಳಗ್ಗೆ ಬಂದು ನೋಡಿದಾಗ ಮನೆಯ ಹಿಂಬಾಗದ ಬಾಗಿಲು ಒಡೆದು ಯಾರೋ ಕಳ್ಳರು ಮನೆಯಲ್ಲಿದ್ದ ಸುಮಾರು 64 ಗ್ರಾಂ ತೂಕದ ಚಿನ್ನಾಭರಣ ಹಾಗೂ 25, ಸಾವಿರ ರೂಪಾಯಿ ನಗದು ಸೇರಿದಂತೆ ಒಟ್ಟು 8.57 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಬರ್ಕೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ಕೈಗೊಂಡ ಬರ್ಕೆ ಪೊಲೀಸರು ಐದೇ ದಿನದಲ್ಲಿ ಪ್ರಕರಣ ಬೇಧಿಸಿದ್ದಾರೆ. ಜುಲೈ 17 ರಂದು ಬೆಳಗ್ಗಿನ ಜಾವ ನೇಪಾಳ ಮೂಲದ 3 ಜನ ಕುಖ್ಯಾತ ಮನೆಗಳ್ಳರನ್ನು ಬೋಳೂರಿನಲ್ಲಿ ಬಂಧಿಸಿ, ವಿಚಾರಣೆಗೆ ಒಳಪಡಿಸಿ, ಆರೋಪಿತರ ವಶದಿಂದ ಬರ್ಕೆ ಪೆÇಲೀಸ್ ಠಾಣಾ ಪ್ರಕರಣಕ್ಕೆ ಸಂಭಂಧಿಸಿದಂತೆ ಎಲ್ಲಾ ಚಿನ್ನಾಭರಣಗಳು ಮತ್ತು ಆರೋಪಿತರು ಮಹಾರಾಷ್ಟ್ರ ರಾಜ್ಯದ ನಾಸಿಕ್ ನಗರದಲ್ಲಿ ಕಳ್ಳತನ ಮಾಡಿದ 790 ಗ್ರಾಂ ಬೆಳ್ಳಿ ಆಭರಣಗಳು ಸೇರಿದಂತೆ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಹಿಂದೆ 2026ರ ಮಾರ್ಚ್ ತಿಂಗಳಿನಲ್ಲಿ ಮಂಗಳೂರು ನಗರದ ಉರ್ವಾ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಪ್ರಯತ್ನ ಪಟ್ಟಿದ್ದು, ಯಾವುದೇ ವಸ್ತುಗಳು ಕಳವಾಗಿರುವುದಿಲ್ಲ. ಸದರಿ ಠಾಣೆಯಲ್ಲಿ ಅ.ಕ್ರ 44/2026 ಕಲಂ 333(1), 331(4), 305, 62 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಗಳು ಸದ್ರಿ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣಾ ವೇಳೆಯಲ್ಲಿ ಒಪ್ಪಿಕೊಂಡಿರುತ್ತಾರೆ.
ಅಲ್ಲದೆ ಕರ್ನಾಟಕ ರಾಜ್ಯದ ಬೆಂಗಳೂರು, ದಾವಣಗೆರೆ, ಉಡುಪಿ ಸೇರಿದಂತೆ ಹಲವಾರು ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 15ಕ್ಕೂ ಹೆಚ್ಚು ಮನೆ ಕಳ್ಳತನ ಮಾಡಿದ್ದು ಇವರ ಮೇಲೆ ಪ್ರಕರಣ ದಾಖಲಾಗಿರುತ್ತದೆ. ಅಲ್ಲದೆ ತಮಿಳುನಾಡು, ದೆಹಲಿ, ಹರ್ಯಾಣ ರಾಜ್ಯಗಳಲ್ಲಿ ಆರೋಪಿತರ ಮೇಲೆ ಪ್ರಕರಣ ದಾಖಲಾಗಿದ್ದು ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಮುಂದಿನ ತನಿಖೆ ನಡೆಸಲಾಗುವುದು. ರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಕಾರ್ಯಚರಣೆಯಲ್ಲಿ ಬರ್ಕೆ ಪೆÇಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.














0 comments:
Post a Comment