ಬಂಟ್ವಾಳ, ಜುಲೈ 23, 2026 (ಕರಾವಳಿ ಟೈಮ್ಸ್) : ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕ, ಕರ್ನಾಟಕ ಬರಹಗಾರರ ಸಂಘ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ದ ಕ ಜಿಲ್ಲಾಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್ ವೇದಿಕೆಗಳ ಅಧ್ಯಕ್ಷ, ಹಿರಿಯ ಪತ್ರಕರ್ತ, ಸಾಹಿತಿ ಜಯಾನಂದ ಪೆರಾಜೆ ಅವರಿಗೆ 2026ನೇ ಸಾಲಿನ ಸಾಲಿನ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ ಘೋಷಿಸಲಾಗಿದೆ.
ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷಾ ಶಿಕ್ಷಕರಾಗಿ, ಉಪನ್ಯಾಸಕರಾಗಿ ಕಳೆದ 40 ವರ್ಷಗಳಿಂದ ಸೇವೆ ಸಲ್ಲಿಸಿರುವ ಜಯಾನಂದ ಪೆರಾಜೆ ಅವರು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದಾರೆ. ರಾಷ್ಟ್ರ ಮಟ್ಟದ ಹಲವು ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದಲ್ಲದೆ ಚುಟುಕು ಕವನ ಸಂಕಲನಗಳನ್ನು ಹೊರತಂದಿದ್ದಾರೆ.
ಬಹುಮುಖ ವ್ಯಕ್ತಿತ್ವದ ಪ್ರತಿಭಾವಂತ, ಕಲಾವಿದ, ನಿರ್ದೇಶಕರಾಗಿ, ಕ್ರೀಯಾಶೀಲ ತರಬೇತುದಾರರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಸಾವಿರಾರು ತರಬೇತಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿರುವ ಇವರು ಜೇಸಿಐ, ಎಸ್‍ಸಿಐ, ಲಯನ್ಸ್ ಕ್ಲಬ್ ಹಾಗೂ ಹಲವು ಸಾಮಾಜಿಕ ಸಂಘಟನೆಯಲ್ಲಿ ತೊಡಗಿಸಿಕೊಂಡು ರಾಷ್ಟ್ರೀಯ ಹಾಗೂ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಪೆರಾಜೆ ಅವರ ಬಹುಮುಖಿ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಗೌರವಿಸಲಾಗುತ್ತಿದೆ ಎಂದು ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ ಕೆ ಎನ್ ವೆಂಕಟರಮಣ ಹೊಳ್ಳ ಮತ್ತು ಕಾಸರಗೋಡು ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ ವಾಮನ ರಾವ್ ಬೇಕಲ್ ಅವರು ತಿಳಿಸಿದ್ದಾರೆ.
ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.











0 comments:
Post a Comment