ಬಂಟ್ವಾಳ, ಜುಲೈ 10, 2026 (ಕರಾವಳಿ ಟೈಮ್ಸ್) : ವಿದ್ಯಾರ್ಥಿಗಳಲ್ಲಿ ಆತ್ಮರಕ್ಷಣೆ ಕೌಶಲ್ಯ, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ ಬ್ರಹ್ಮರಕೂಟ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕರಾಟೆ ತರಬೇತಿ ಕಾರ್ಯಕ್ರಮಕ್ಕೆ ಜುಲೈ 8 ರಂದು ಚಾಲನೆ ನೀಡಲಾಯಿತು.
ತರಬೇತಿ ಕಾರ್ಯಕ್ರಮ ಉದ್ಘಾಟಿಸಿದ ಮಾರ್ಷಲ್ ಆರ್ಟ್ ಕರಾಟೆ ತರಬೇತುದಾರ ರಾಜೇಶ್ ಮಂಜೇಶ್ವರ ಮಾತನಾಡಿ, ಗ್ರಾಮೀಣ ಪ್ರದೇಶದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಕರಾಟೆ ತರಬೇತಿ ನೀಡುವುದು ನಮ್ಮ ಉದ್ದೇಶವಾಗಿದೆ. ಕರಾಟೆ ಕೇವಲ ಆತ್ಮರಕ್ಷಣೆಯ ಕಲೆಯಲ್ಲ, ಅದು ಶಿಸ್ತು, ಆತ್ಮವಿಶ್ವಾಸ, ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಅತ್ಯುತ್ತಮ ಕಲೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಎಸ್‍ಡಿಎಂಸಿ ಅಧ್ಯಕ್ಷ ಉದಯ ಕುಮಾರ್ ಜ್ಯೋತಿಗುಡ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಲಾವಿದ ಹರೀಶ್ ಆಚಾರ್ಯ ಹಾಗೂ ಪತ್ರಕರ್ತ ಯಾದವ ಅಗ್ರಬೈಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ, ಶಿಕ್ಷಕ ವೃಂದ, ಎಸ್‍ಡಿಎಂಸಿ ಸದಸ್ಯರು, ಪೆÇೀಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.















0 comments:
Post a Comment