ಕರಾವಳಿ ಪ್ರದೇಶಗಳ ಅಭಿವೃದ್ದಿ ಸಂಬಂಧಿ ಕಾಮಗಾರಿ ಆದ್ಯತೆ ಮೇರೆಗೆ ಕಾಲಮಿತಿಯಲ್ಲಿ ಪೂರ್ಣಗೊಳಿಸಿ : ಗಫೂರ್ ನಿರ್ದೇಶನ - Karavali Times ಕರಾವಳಿ ಪ್ರದೇಶಗಳ ಅಭಿವೃದ್ದಿ ಸಂಬಂಧಿ ಕಾಮಗಾರಿ ಆದ್ಯತೆ ಮೇರೆಗೆ ಕಾಲಮಿತಿಯಲ್ಲಿ ಪೂರ್ಣಗೊಳಿಸಿ : ಗಫೂರ್ ನಿರ್ದೇಶನ - Karavali Times

728x90

3 July 2026

ಕರಾವಳಿ ಪ್ರದೇಶಗಳ ಅಭಿವೃದ್ದಿ ಸಂಬಂಧಿ ಕಾಮಗಾರಿ ಆದ್ಯತೆ ಮೇರೆಗೆ ಕಾಲಮಿತಿಯಲ್ಲಿ ಪೂರ್ಣಗೊಳಿಸಿ : ಗಫೂರ್ ನಿರ್ದೇಶನ

ಮಂಗಳೂರು, ಜುಲೈ 03, 2026 (ಕರಾವಳಿ ಟೈಮ್ಸ್) : ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ನಿರ್ದೇಶನ ನೀಡಿದರು. 

ಕರಾವಳಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಅನುಷ್ಠಾನದ ಸಂಸ್ಥೆಗಳೊಂದಿಗೆ ನಡೆಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲನೆಯನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳುವುದಾಗಿ ತಿಳಿಸಿದರು. ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯಿಂದ ವಿವಿಧ ಅನುಷ್ಠಾನ ಸಂಸ್ಥೆಗಳ ಮೂಲಕ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಸಮಗ್ರವಾಗಿ ಪರಿಶೀಲಿಸಲಾಯಿತು.

ಈ ಸಂದರ್ಭ ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಡಿಸೋಜಾ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಮಂಜುನಾಥ್ ಆರ್. ಶೆಟ್ಟಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶ್ರೀಧರ್, ಲೆಕ್ಕ ಪರಿಶೋಧನಾಧಿಕಾರಿ ಮೊಹಮ್ಮದ್ ತೌಸೀಫ್, ಮಂಡಳಿಯ ವಲಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮೂರು ಕರಾವಳಿ ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಕರಾವಳಿ ಪ್ರದೇಶಗಳ ಅಭಿವೃದ್ದಿ ಸಂಬಂಧಿ ಕಾಮಗಾರಿ ಆದ್ಯತೆ ಮೇರೆಗೆ ಕಾಲಮಿತಿಯಲ್ಲಿ ಪೂರ್ಣಗೊಳಿಸಿ : ಗಫೂರ್ ನಿರ್ದೇಶನ Rating: 5 Reviewed By: karavali Times
Scroll to Top