ಜುಲೈ 27 ರಿಂದ ಆಗಸ್ಟ್ 1ರವರೆಗೆ ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮೇಳ - Karavali Times ಜುಲೈ 27 ರಿಂದ ಆಗಸ್ಟ್ 1ರವರೆಗೆ ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮೇಳ - Karavali Times

728x90

21 July 2026

ಜುಲೈ 27 ರಿಂದ ಆಗಸ್ಟ್ 1ರವರೆಗೆ ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮೇಳ

ಮಂಗಳೂರು, ಜುಲೈ 21, 2026 (ಕರಾವಳಿ ಟೈಮ್ಸ್) : ಸರ್ಕಾರದ ಆದೇಶದಂತೆ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡು ರಾಜ್ಯದ ಎಲ್ಲಾ ಸರಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ ಮಂಡಳಿ/ ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು ಅಲ್ಲದೇ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ಇಲಾಖೆಗಳ ಅಧಿಕಾರಿ/ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. 

ಅದರಂತೆ ರೂರಲ್ ರಿಸೋರ್ಸಸ್ ಡೆವಲಪ್ ಮೆಂಟ್ ಎಸೋಸಿಯೇಶನ್ ಸಂಘದವರು ಮಂಗಳೂರಿನಲ್ಲಿ ದೈನಂದಿನ ಬಳಕೆಯ ಖಾದಿ ಉಡುಪುಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಉದ್ದೇಶಿಸಿದ್ದು, ಜುಲೈ 27 ರಿಂದ ಆಗಸ್ಟ್ 1ರವರೆಗೆ ನಗರದ ಮಿನಿ ವಿಧಾನಸೌಧ  ಆವರಣದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಮಾರಾಟ ಮಾಡಲಾಗುತ್ತದೆ. 

ಈ ನಿಟ್ಟಿನಲ್ಲಿ ಅಧಿಕಾರಿ/ ಸಿಬ್ಬಂದಿ ವರ್ಗದವರು ಮೇಲ್ಕಂಡ ವಿಳಾಸಕ್ಕೆ ಭೇಟಿ ನೀಡಿ ಖಾದಿ ಉಡುಪುಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಖರೀದಿಸಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಜುಲೈ 27 ರಿಂದ ಆಗಸ್ಟ್ 1ರವರೆಗೆ ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮೇಳ Rating: 5 Reviewed By: karavali Times
Scroll to Top