ಕೂಳೂರು : ಕಂಟೈನರ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಪಾಟ್ ಡೆತ್ - Karavali Times ಕೂಳೂರು : ಕಂಟೈನರ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಪಾಟ್ ಡೆತ್ - Karavali Times

728x90

3 July 2026

ಕೂಳೂರು : ಕಂಟೈನರ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಪಾಟ್ ಡೆತ್

ಮಂಗಳೂರು, ಜುಲೈ 03, 2026 (ಕರಾವಳಿ ಟೈಮ್ಸ್) :  ಕಂಟೈನರ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು-ಉಡುಪಿ ರಸ್ತೆಯ ಕೂಳೂರು ವಿ ಆರ್ ಎಲ್ ಕಚೇರಿ ಎದುರು ಜುಲೈ 3 ರಂದು ಸಂಜೆ ಸಂಭವಿಸಿದೆ. 

ಮೃತ ಸ್ಕೂಟರ್ ಸವಾರನನ್ನು ಸದಾನಂದ ಶೆಟ್ಟಿಗಾರ್ (46) ಎಂದು ಹೆಸರಿಸಲಾಗಿದೆ. ಇವರು ತನ್ನ ಸ್ಕೂಟರಿನಲ್ಲಿ ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿರುವಾಗ ಅದೇ ರಸ್ತೆಯಲ್ಲಿ ಮಹಮ್ಮದ್ ಅಝರುದ್ದೀನ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಕಂಟೈನರ್ ಲಾರಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ. ಕಂಟೈನರ್ ಲಾರಿ ಸ್ಕೂಟರ್ ಸವಾರನ ಮೇಲೆ ಹರಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಂಟೈನರ್ ಚಾಲಕನ ನಿರ್ಲಕ್ಷ್ಯ ಹಾಗೂ ದುಡುಕುತನದ ಚಾಲನೆಯೇ ಭೀಕರ ಅಪಘಾತಕ್ಕೆ ಕಾರಣ ಎನ್ನಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕೂಳೂರು : ಕಂಟೈನರ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಪಾಟ್ ಡೆತ್ Rating: 5 Reviewed By: karavali Times
Scroll to Top