ಬಂಟ್ವಾಳ, ಜುಲೈ 28 2026 (ಕರಾವಳಿ ಟೈಮ್ಸ್) : ಬಿ ಸಿ ರೋಡು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಜುಲೈ 16 ರಂದು ನಡೆದ ಕು ಲಾವಣ್ಯ ಎಂಬಾಕೆಯನ್ನು ಹತ್ಯೆ ಮಾಡಿದ ಆರೋಪಿ ಚೇತನ್ ಎಂಬಾತ ಜುಲೈ 28 ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಆತನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ 4 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜುಲೈ 16 ರಂದು ಗುರುವಾರ ಸಂಜೆ ಸುಮಾರು 5.45ರ ವೇಳೆಗೆ ಕಕ್ಯಪದವು ನಿವಾಸಿ ಲಾವಣ್ಯ ಗೌಡ ಅವರನ್ನು ಏಕಮುಖ ಪ್ರೀತಿಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಗೌಡ ಎಂಬ ಆರೋಪಿ ಆಕೆಯನ್ನು ಅಟ್ಟಾಡಿಸಿ ಕತ್ತಿಯಿಂದ ಕಡಿದು ಹತ್ಯೆ ನಡೆಸಿದ್ದ. ಹತ್ಯೆ ನಡೆಸಿದ ಬಳಿಕ ಆರೋಪಿ ತಾನು ಬಂದ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದ. ಮರುದಿನ ಮಂಗಳೂರಿನ ಪಚ್ಚನಾಡಿನಲ್ಲಿ ಆರೋಪಿಯನ್ನು ಪೆÇಲೀಸರು ವಶಕ್ಕೆ ಪಡೆದಿದ್ದರು. ಆದರೆ ಆತ ವಿಷಕಾರಿ ಪದಾರ್ಥ (ಇಲಿ ಪಾಷಾಣ) ಸೇವಿಸಿದ್ದೇನೆ ಎಂಬ ಹೇಳಿಕೆ ನೀಡಿದ್ದರಿಂದಾಗಿ ಆತನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕ (ಐಸಿಯು) ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆತನ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಬಳಿಕ ಇತ್ತೀಚೆಗೆ ಸಾಮಾನ್ಯ ವಾರ್ಡಿಗೆ ಸ್ಥಳಾಂತರಿಸಲಾಗಿತ್ತು. ಇದೀಗ ಆತ ಆಸ್ಪತ್ರೆಗೆ ಬಿಡುಗಡೆಗೊಂಡಿದ್ದು, ಆತನನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜುರಪಡಿಸಿ ಬಳಿಕ ಹೆಚ್ಚಿನ ವಿಚಾರಣೆಗಾಗಿ ಮತ್ತೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ಎಎಸ್ಪಿ ಯಶ್ ಕುಮಾರ್ ಶರ್ಮ ಅವರ ನಿರ್ದೇಶನದಂತೆ ಬಂಟ್ವಾಳ ನಗರ ಠಾಣಾ ಪೆÇೀಲೀಸ್ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಅವರ ಮುಂದಾಳುತ್ವದಲ್ಲಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ.











0 comments:
Post a Comment