ಬಂಟ್ವಾಳ, ಜುಲೈ 30, 2026 (ಕರಾವಳಿ ಟೈಮ್ಸ್) : ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್ ಅವರು ಜುಲೈ 30 ರಂದು ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಪದ್ಮನಾಭ ಭಟ್ ಅವರು ಪ್ರಸಾದ ನೀಡಿ ಆಶೀರ್ವದಿಸಿದರು. ಇದೇ ವೇಳೆ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ರವೀಂದ್ರ ಚೌಹಾಣ್ ಅವರನ್ನು ಗೌರವಿಸಿದರು.
ಈ ಸಂದರ್ಭ ವೆಂಕಟೇಶ್ ನಾವಡ, ಯಶವಂತ ಪೊಳಲಿ, ಸುಪ್ರೀತ್ ಆಳ್ವ, ಪುರುಷೋತ್ತಮ ಶೆಟ್ಟಿ ವಾಮದಪದವು, ಸಚಿನ್ ಅಡಪ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ ಪಿ ಚಂದ್ರಮೋಹನ್ ಮೊದಲಾದವರು ಜೊತೆಗಿದ್ದರು.














0 comments:
Post a Comment