ಬಂಟ್ವಾಳ, ಜುಲೈ 16, 2026 (ಕರಾವಳಿ ಟೈಮ್ಸ್) : ಬಂಟ್ವಾಳದಲ್ಲಿ ಯುವತಿಯ ಬರ್ಬರ ಹತ್ಯೆ ನಡೆದ ಸುದ್ದಿ ತಿಳಿದು ಪುರಿ ಜಗನ್ನಾಥ ರಥೋತ್ಸವದಲ್ಲಿ ಭಾಗಿಯಾಗಿರುವ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ಘಟನೆಗೆ ತೀವ್ರ ಖೇದ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದು, ವಿಳಂಬವಿಲ್ಲದೆ ಆರೋಪಿಯನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಒಡಿಶಾದ ಪುರಿ ಜಗನ್ನಾಥ ದೇವರ ವಿಶ್ವಪ್ರಸಿದ್ಧ ರಥೋತ್ಸವದಲ್ಲಿ ಭಾಗಿಯಾಗಿರುವ ಶಾಸಕರು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೆÇಲೀಸ್ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಯಾವುದೇ ವಿಳಂಬವಿಲ್ಲದೆ ಬಂಧಿಸಿ, ಅನ್ವಯವಾಗುವ ಎಲ್ಲಾ ಕಾನೂನುಗಳಡಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ಹಾಗೂ ಶೀಘ್ರ ಗತಿಯಲ್ಲಿ ಪೂರ್ಣಗೊಳಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಶಾಸಕರು, ಪ್ರಕರಣದಲ್ಲಿ ಆರೋಪಿಯ ಜೊತೆಗೆ ಇತರ ವ್ಯಕ್ತಿಗಳ ಪಾತ್ರವೂ ಇದ್ದರೆ, ಆ ಕುರಿತು ಸಮಗ್ರ ತನಿಖೆ ನಡೆಸಿ, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸಂಬಂಧಪಟ್ಟ ಎಲ್ಲರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮುಂದಕ್ಕೆ ಈ ರೀತಿಯ ದುರ್ಘಟನೆಗಳು ಮರುಕಳಿಸದಂತೆ ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪೆÇಲೀಸ್ ನಿಗಾವನ್ನು ಮತ್ತಷ್ಟು ಬಲಪಡಿಸಬೇಕು. ಅಗತ್ಯವಿದ್ದರೆ ಹೆಚ್ಚುವರಿ ಪೆÇಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ಸಿಸಿಟಿವಿ ನಿಗಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಹಾಗೂ ಮಹಿಳೆಯರ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಶಾಸಕ ರಾಜೇಶ್ ನಾಯಕ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವ ನಿಟ್ಟಿನಲ್ಲಿ ಪೆÇಲೀಸರು ಕಟ್ಟುನಿಟ್ಟಿನ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ಅಪರಾಧ ಕೃತ್ಯಗಳಿಗೆ ಅವಕಾಶ ನೀಡದ ವಾತಾವರಣ ನಿರ್ಮಾಣವಾಗಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.











0 comments:
Post a Comment