ಮಂಗಳೂರು, ಜುಲೈ 21, 2026 (ಕರಾವಳಿ ಟೈಮ್ಸ್) : ಮನೆಯ ಕೆಲಸ ನಿರ್ವಹಿಸಲು ಬಂದಿದ್ದ ವ್ಯಕ್ತಿಯೋರ್ವ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣ ಬೇಧಿಸಿದ ಮಂಗಳೂರು ಗ್ರಾಮಾಂತರ ಪೊಲೀಸರು ಉತ್ತರ ಪ್ರದೇಶ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೂಲತಃ ಉತ್ತರ ಪ್ರದೇಶ ಮೂಲದ, ಪ್ರಸ್ತುತ ಬಂದರು-ಅಝೀಝುದ್ದೀನ್ ರಸ್ತೆ ಎಂಬಲ್ಲಿ ವಾಸವಾಗಿರುವ ಜಹೀರುದ್ದೀನ್ (24) ಎಂದು ಹೆಸರಿಸಲಾಗಿದೆ.
ಮಂಗಳೂರು ನಗರದ ಮೇರಿಹಿಲ್ ಬಾಂದೋಟ್ಟು ಎಂಬಲ್ಲಿ ಮನೆಯೊಂದರ ಹಿಂಭಾಗದ ಕೊಠಡಿಯ ಛಾವಣಿ ಬದಲಾವಣೆ ಹಾಗೂ ನಂತರ ಹಾಲಿನಲ್ಲಿ ಫಾಲ್ಸ್ ಸೀಲಿಂಗ್ ಕಾಮಗಾರಿಯನ್ನು ಮೇಸ್ತ್ರಿ ಹಾಗೂ ಸಹಾಯಕ ಕೆಲಸದಾರರ ಮೂಲಕ ನಡೆಸಲಾಗಿತ್ತು. ಈ ಅವಧಿಯಲ್ಲಿ ಮನೆಯ ಕೋಟೆಯ ಟೇಬಲ್ ಡ್ರಾವರಿನಲ್ಲಿದ್ದ ಸಣ್ಣ ಪರ್ಸಿನಲ್ಲಿ ಇರಿಸಲಾಗಿದ್ದ 20 ಗ್ರಾಂ ತೂಕದ ಚಿನ್ನದ ಕಡಗ, 17 ಗ್ರಾಂ ತೂಕದ ಚಿನ್ನದ ಚೈನ್, 8 ಗ್ರಾಂ ತೂಕದ ಉಂಗುರ, 4 ಗ್ರಾಂ ತೂಕದ ಚಿನ್ನದ ಉಂಗುರ ಹಾಗೂ ಸೊನಾಟಾ ಕಂಪೆನಿಯ ಗೋಲ್ಡ್ ಕೋಟೆಡ್ ವಾಚ್ ಸೇರಿ ಸುಮಾರು 6.37 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳು ಕಳವು ಆಗಿತ್ತು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಮನೆ ಕೆಲಸಕ್ಕೆ ಇದ್ದ ಕೆಲಸಗಾರರನ್ನು ಕೂಲಂಕುಷವಾಗಿ ವಿಚಾರಣೆ ನಡೆಸಿದಾಗ ಆರೋಪಿ ಜಹೀರುದ್ದೀನ್ ಚಿನ್ನಾಭರಣ ಹಾಗೂ ವಾಚನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಆರೋಪಿಯಿಂದ ಕಳವಾಗಿದ್ದ ಚಿನ್ನಾಭರಣಗಳನ್ನು ಹಾಗೂ ವಾಚನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಕರಣ ಭೇಧಿಸುವಲ್ಲಿ ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯ ಪೆÇಲೀಸ್ ಇನ್ಸ್ಪೆಕ್ಟರ್ ಡಿ.ಅರ್ ಮಂಜಪ್ಪ, ಪಿಎಸ್ಸೈ ಅರುಣ್ ಕುಮಾರ್ ಡಿ ಹಾಗೂ ಸಿಬ್ಬಂದಿಗಳ ತಂಡವು ಕ್ಷಿಪ್ರ ಹಾಗೂ ಕೂಲಂಕುಷವಾಗಿ ವಿಚಾರಣೆ ನಡೆಸಿ ಪ್ರಕರಣವನ್ನು ಭೇಧಿಸಿ ಆರೋಪಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.












0 comments:
Post a Comment