ಹಾಂಗ್ ಕಾಂಗ್ ದೇಶಕ್ಕೆ ಪ್ರವಾಸಕ್ಕೆ ತೆರಳಿದ ಸಾಫ್ಟ್ ವೇರ್ ಇಂಜಿನಿಯರ್ ಕಾಣೆ : ಉರ್ವ ಠಾಣೆಯಲ್ಲಿ ದೂರು ದಾಖಲು - Karavali Times ಹಾಂಗ್ ಕಾಂಗ್ ದೇಶಕ್ಕೆ ಪ್ರವಾಸಕ್ಕೆ ತೆರಳಿದ ಸಾಫ್ಟ್ ವೇರ್ ಇಂಜಿನಿಯರ್ ಕಾಣೆ : ಉರ್ವ ಠಾಣೆಯಲ್ಲಿ ದೂರು ದಾಖಲು - Karavali Times

728x90

14 July 2026

ಹಾಂಗ್ ಕಾಂಗ್ ದೇಶಕ್ಕೆ ಪ್ರವಾಸಕ್ಕೆ ತೆರಳಿದ ಸಾಫ್ಟ್ ವೇರ್ ಇಂಜಿನಿಯರ್ ಕಾಣೆ : ಉರ್ವ ಠಾಣೆಯಲ್ಲಿ ದೂರು ದಾಖಲು

ಮಂಗಳೂರು, ಜುಲೈ 14, 2026 (ಕರಾವಳಿ ಟೈಮ್ಸ್) : ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಸಾಫ್ಟ್ ವೇರ್ ಇಂಜಿನಿಯರ್ ಚೇತನ್ ರಾಮಚಂದ್ರ ಕರ್ಕೆರಾ (37) ಅವರು ಕಳೆದ ನವೆಂಬರ್ 9 ರಿಂದ  ಡಿಸೆಂಬರ್  12 ತನಕ ಪ್ರವಾಸಕ್ಕೆಂದು ಹಾಂಗ್ ಕಾಂಗ್ ದೇಶಕ್ಕೆ ಹೋಗುವುದಾಗಿ ತಿಳಿಸಿ ಹೋದವರು ಮನೆಗೆ ವಾಪಾಸು ಬಾರದೆ ಕಾಣೆಯಾಗಿದ್ದಾರೆ. ಈ ಬಗ್ಗೆ ಉರ್ವಾ ಪೆÇೀಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಾಣೆಯಾದ ಚೇತನ್ ಕರ್ಕೇರಾ ಅವರು 5.2 ಅಡಿ ಎತ್ತರ, ಬಿಳಿ ಮೈಬಣ್ಣ ಹೊಂದಿರುತ್ತಾರೆ. ಕನ್ನಡ, ತುಳು, ಇಂಗ್ಲಿಷ್, ಹಿಂದಿ, ಕೊಂಕಣಿ ಭಾಷೆ ಮಾತನಾಡುತ್ತಾರೆ. ಜೀನ್ಸ್ ಪ್ಯಾಂಟ್ ಮತ್ತು ಜರ್ಕಿನ್, ಟೀ ಶರ್ಟ್ ಧರಿಸಿದ್ದರು. ಇವರ ಬಗ್ಗೆ ಮಾಹಿತಿ ಇದ್ದವರು ಉರ್ವಾ ಪೆÇಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಹಾಂಗ್ ಕಾಂಗ್ ದೇಶಕ್ಕೆ ಪ್ರವಾಸಕ್ಕೆ ತೆರಳಿದ ಸಾಫ್ಟ್ ವೇರ್ ಇಂಜಿನಿಯರ್ ಕಾಣೆ : ಉರ್ವ ಠಾಣೆಯಲ್ಲಿ ದೂರು ದಾಖಲು Rating: 5 Reviewed By: karavali Times
Scroll to Top