12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣದ ತೀರ್ಪು ನೀಡಿದ ಮಂಗಳೂರು ನ್ಯಾಯಾಲಯ : ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ - Karavali Times 12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣದ ತೀರ್ಪು ನೀಡಿದ ಮಂಗಳೂರು ನ್ಯಾಯಾಲಯ : ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ - Karavali Times

728x90

27 July 2026

12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣದ ತೀರ್ಪು ನೀಡಿದ ಮಂಗಳೂರು ನ್ಯಾಯಾಲಯ : ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ

ಮಂಗಳೂರು, ಜುಲೈ 27 2026 (ಕರಾವಳಿ ಟೈಮ್ಸ್) : 2014 ರಲ್ಲಿ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಜುಲೈ 27 ರಂದು ತೀರ್ಪಿತ್ತಿದೆ. 

ಶಿಕ್ಷೆಗೊಳಗಾದ ಆರೋಪಿಗಳನ್ನು ಸತೀಶ್ ಬೈಕಂಪಾಡಿ, ಪುಷ್ಪರಾಜ್, ಹರೀಶ್ ಬೈಕಂಪಾಡಿ, ಭಾಸ್ಕರ್ ಬೈಕಂಪಾಡಿ ಎಂದು ಗುರುತಿಸಲಾಗಿದೆ. 

2014 ರ ಮೇ 15 ರಂದು ಪಣಂಬೂರು ಪೆÇಲೀಸ್ ಠಾಣಾ ವ್ಯಾಪ್ತಿಯ ಮೀನಕಳಿಯಾ ಗಣೇಶ್ ಶಿಪ್ಪಿಂಗ್ ಗೋಡೌನ್ ಬಳಿ ಸಾರ್ವಜನಿಕ ರಸ್ತೆಯಲ್ಲಿ ಮೀನಕಳಿಯ ನಿವಾಸಿ ಗಂಗಾಧರ ಪಾಂಗಾಳ ಎಂಬವರನ್ನು ಆರೋಪಿಗಳಾದ ಸತೀಶ್ ಬೈಕಂಪಾಡಿ, ಪುಷ್ಪರಾಜ್, ಹರೀಶ್ ಬೈಕಂಪಾಡಿ, ಭಾಸ್ಕರ್ ಬೈಕಂಪಾಡಿ ಎಂಬವರುಗಳು ಸೇರಿ ಹಳೆ ದ್ವೇಷದಿಂದ ಒಳಸಂಚು ನಡೆಸಿ ಕೊಲೆ ಮಾಡಿದ್ದರು. ಆದರೆ ಮೊದಲಿಗೆ ರಸ್ತೆಯಲ್ಲಿ ಅಪಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿ, ಅಪಘಾತ ಪ್ರಕರಣ ದಾಖಲಾಗಿದ್ದು, ನಂತರ ಪ್ರಾಥಮಿಕ ತನಿಖೆಯಲ್ಲಿ ಕೊಲೆ ಎಂದು ಕಂಡು ಬಂದಿದ್ದರಿಂದ ಈ ಬಗ್ಗೆ ಪಣಂಬೂರು ಠಾಣೆಯಲ್ಲಿ  ಅ.ಕ್ರ ನಂಬ್ರ 98/2014 ಕಲಂ: 302, 201, 109, 120(ಬಿ) ಸಹಿತ 34 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು. 

ಗಂಗಾಧರ ಪಾಂಗಳರವರ ಕೊಲೆ ಪ್ರಕರಣದ 1ನೇ ಆರೋಪಿ ಸತೀಶ್ ಬೈಕಂಪಾಡಿ ಎಂಬಾತನನ್ನು  ಬೈಕಂಪಾಡಿ ಮೊಗವೀರ ಮಹಾಸಭಾದ ಸದಸ್ಯತ್ವದಿಂದ ಅಮಾನತುಪಡಿಸಲು ಮೃತ ಗಂಗಾಧರ ಪಾಂಗಾಳರವರೇ ಮೂಲ ಕಾರಣಕರ್ತರೆಂದು ಭಾವಿಸಿ  ಅವರ ಮೇಲೆ ದ್ವೇಷ ಸಾಧಿಸಿದ ಆರೋಪಿಗಳು ಪೂರ್ವ ನಿಯೋಜಿತ  ಒಳಸಂಚು ರೂಪಿಸಿ  ಬೊಲೇರೋ ವಾಹನ ಮೂಲಕ ಗಂಗಾಧರ ಪಾಂಗಾಳ ಅವರ ಸ್ಕೂಟರಿಗೆ ಉದ್ದೇಶಪೂರ್ವಕವಾಗಿ  ಹಿಂದಿನಿಂದ ಹಿಂಬಾಲಿಸಿ ಬಂದು ಡಿಕ್ಕಿ ಹೊಡೆದಿದ್ದರು. ಗಂಗಾಧರ ಪಾಂಗಾಳ ಅವರು ಕೆಳಗೆ ಬಿದ್ದು ತಲೆ, ಮೈ ಕೈಗೆ ಪೆಟ್ಟಾಗಿ ಮೃತಪಟ್ಟ ಬಗ್ಗೆ ಧೃಢಪಡಿಸಿಕೊಂಡ ನಂತರ ಆರೋಗಳು ತಾವು ಬಂದ ವಾಹನದ ಸಮೇತ ಸ್ಥಳದಿಂದ ಪರಾರಿಯಾಗಿದ್ದರು.  

ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 27ರಂದು 1 ರಿಂದ 4ನೇ ಆರೋಪಿತರ ವಿರುದ್ಧ ಆರೋಪ ಸಾಬೀತಾದ ಕಾರಣ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. 

ಆರೋಪಿಗಳಾದ ಸತೀಶ್ ಬೈಕಂಪಾಡಿ, ಹರೀಶ್ ಬೈಕಂಪಾಡಿ, ಭಾಸ್ಕರ್ ಬೈಕಂಪಾಡಿ (ಈ 3 ಮಂದಿ ಆರೋಪಿಗಳು ಸಹೋದರರಾಗಿರುತ್ತಾರೆ.) ಇವರು ಪಣಂಬೂರು ಠಾಣಾ ವ್ಯಾಪ್ತಿಯ ಮೀನಕಳಿಯ ನಿವಾಸಿಗಳಾಗಿದ್ದು, ಹಾಗೂ ಮತ್ತೊಬ್ಬ ಆರೋಪಿ ಪುಷ್ಪರಾಜ್ ಎಂಬಾತ ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ಸದರಿ ಎಲ್ಲಾ 4 ಮಂದಿ ಆರೋಪಿಗಳಿಗೆ ನ್ಯಾಯಾಧೀಶ ಜಗದೀಶ್ ವಿ ಎನ್ ಅವರು ಶಿಕ್ಷೆ ವಿಧಿಸಿ ತೀರ್ಪಿತ್ತಿದ್ದಾರೆ. 

ಆರೋಪಿಗಳಾದ ಸತೀಶ್ ಬೈಕಂಪಾಡಿ(57), ಹರೀಶ್ ಬೈಕಂಪಾಡಿ (61), ಭಾಸ್ಕರ್ ಬೈಕಂಪಾಡಿ (63 ವರ್ಷ) ಅವರುಗಳಿಗೆ ಕಲಂ 302, 120, 109 ಜೊತೆ 34 ಐಪಿಸಿಗಳಲ್ಲಿ ಜೀವಾವಧಿ ಶಿಕ್ಷೆ ಮತ್ತು 15 ಸಾವಿರ  ರೂಪಾಯಿ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದ್ದಲ್ಲಿ ಒಂದು ವರ್ಷ ಹೆಚ್ಚುವರಿ ಸಾದಾಶಿಕ್ಷೆ ಮತ್ತು  ಪ್ರಕರಣದಲ್ಲಿ ಆರೋಪಿ ಪುಷ್ಪರಾಜ್ (47) ಎಂಬಾತನಿಗೆ ಕಲಂ 302, 120, ಜೊತೆ 34 ಐಪಿಸಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು 15 ಸಾವಿರ ರೂಪಾಯಿ ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ 1 ವರ್ಷ ಹೆಚ್ಚುವರಿ ಸಾದಾ ಶಿಕ್ಷೆ ಹಾಗೂ ಕಲಂ 201  ಆರ್/ಡಬ್ಲ್ಯು34 ಐಪಿಸಿ ಕಲಂನಡಿ ಎಲ್ಲಾ ಆರೋಪಿತರಿಗೆ ಎರಡು ವರ್ಷ ಸಾದಾ ಶಿಕ್ಷೆ ಮತ್ತು ತಲಾ 1 ಸಾವಿರ ರೂಪಾಯಿ ದಂಡ, ದಂಡ ಪಾವತಿಸಲು ತಪ್ಪಿದರೆ ಒಂದು ತಿಂಗಳ ಹೆಚ್ಚುವರಿ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿರುತ್ತಾರೆ. ಮುಂದುವರೆದು 60 ಸಾವಿರ ರೂಪಾಯಿ ವಿಧಿಸಿದ ದಂಡದ ಪೈಕಿ 50 ಸಾವಿರ ರೂಪಾಯಿ ಮೊತ್ತವನ್ನು ಪರಿಹಾರವಾಗಿ ಮೃತನ ಮಗಳಿಗೆ ಮತ್ತು 16 ಸಾವಿರ ರೂಪಾಯಿ ಮೊತ್ತವನ್ನು ಸರಕಾರಕ್ಕೆ ಪಾವತಿಸಲು ಆದೇಶಿಸಲಾಗಿದೆ. ಕೃತ್ಯಕ್ಕೆ ಬಳಸಿದ ಆರೋಪಿತರಿಗೆ ಸೇರಿದ ಬೊಲೆರೋ, ರಿಟ್ಝ್ ಹಾಗೂ ಮಾರುತಿ ಕಾರನ್ನು ವಶಕ್ಕೆ ಪಡೆದು ಸರ್ಕಾರಕ್ಕೆ ಮುಟ್ಟಗೋಲು ಹಾಕಲು ಆದೇಶಿಸಲಾಗಿದೆ. 

ನ್ಯಾಯಾಲಯದ ಆದೇಶದಂತೆ 4 ಜನ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.   ತನಿಖೆಯನ್ನು ಪಣಂಬೂರು ಪೆÇಲೀಸ್ ಠಾಣೆಯ ಅಗಿನ ಪೆÇಲೀಸ್ ಇನ್ಸ್ ಪೆಕ್ಟರ್ ಗಳಾದ ಎನ್. ಆರ್ ಮುಕ್ರಿ,  ಭಾಸ್ಕರ್ ರೈ, ರವೀಶ್ ನಾಯಕ್ ಅವರುಗಳು ಭಾಗಶಃ ತನಿಖೆ ನಡೆಸಿದ್ದು, ಲೋಕೇಶ್ ಎ.ಸಿ  ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಶ್ರೀಮತಿ ಜ್ಯೋತಿ ಪ್ರಮೋದ ನಾಯಕ ಅವರು ವಾದಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: 12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣದ ತೀರ್ಪು ನೀಡಿದ ಮಂಗಳೂರು ನ್ಯಾಯಾಲಯ : ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ Rating: 5 Reviewed By: karavali Times
Scroll to Top