ಮಂಗಳೂರು, ಜುಲೈ 31, 2026 (ಕರಾವಳಿ ಟೈಮ್ಸ್) : ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅಕ್ಟೋಬರ್ 1 ರಂದು ರಾಜ್ಯ ಮಟ್ಟದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡೆ ಹಾಗೂ ಸಮಾಜ ಸೇವೆ) ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 20 ರೊಳಗೆ ಅರ್ಜಿಯನ್ನು ನಗರದ ಕೊಟ್ಟಾರ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ಅಥವಾ ಕಛೇರಿಯ ದೂರವಾಣಿ ಸಂಖ್ಯೆ 0824-2458173, 2455999 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











0 comments:
Post a Comment