ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಬಂಧನ - Karavali Times ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಬಂಧನ - Karavali Times

728x90

23 July 2026

ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಬಂಧನ

ಸುಳ್ಯ, ಜುಲೈ 23, 2026 (ಕರಾವಳಿ ಟೈಮ್ಸ್) : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಕಡಬ ನಿವಾಸಿ ಧನುಷ್ (18) ಎಂಬಾತನ ವಿರುದ್ದ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. 

ಈ ಬಗ್ಗೆ ಬಾಲಕಿಯ ತಂದೆ ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಇವರ ಅಪ್ರಾಪ್ತ ಪ್ರಾಯದ ಪುತ್ರಿ ಮೇ 7 ರಂದು ಮಂಗಳೂರಿಗೆ ಕೆಲಸಕ್ಕಾಗಿ ಹೋಗುತ್ತಿರುವುದಾಗಿ ಮನೆಯಿಂದ ತೆರಳಿದವಳು ಆ ಬಳಿಕ ಮನೆಗೆ ಹಿಂತಿರುಗದೇ ಕಾಣೆಯಾಗಿದ್ದು, ಈ ಬಗ್ಗೆ ಮೇ 11 ರಂದು ಸುಳ್ಯ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 64/2026 ಕಲಂ 137 (2) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿತ್ತು. 

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಾಣೆಯಾದ ಬಾಲಕಿಯನ್ನು ಜುಲೈ 22 ರಂದು ಪತ್ತೆ ಮಾಡಲಾಗಿದ್ದು, ಸದ್ರಿ ಬಾಲಕಿಯನ್ನು ಆರೋಪಿ ಧನುಷ್ ಎಂಬಾತನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜಜ್ಯ ನಡೆಸಿರುವುದಾಗಿ ಬಾಲಕಿ ನೀಡಿದ ಹೇಳಿಕೆಯ ಮೇರೆಗೆ, ಪ್ರಕರಣದಲ್ಲಿ ಕಲಂ 64(2)(ಎಂ) ಬಿ ಎನ್ ಎಸ್ ಕಲಂ 5(1),6 ಪೋಕ್ಸೋ ಕಾಯ್ದೆಯನ್ನು ಹೆಚ್ಚುವರಿಯಾಗಿ ಅಳವಡಿಸಲಾಗಿರುತ್ತದೆ. ಆರೋಪಿಯನ್ನು ಜುಲೈ 22 ರಂದು ದಸ್ತಗಿರಿ ಮಾಡಿ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಬಂಧನ Rating: 5 Reviewed By: karavali Times
Scroll to Top