ಬರಿಮಾರು ಬಸ್ ದುರಂತದಲ್ಲಿ ಮೃತ ಬಾಲಕಿಯ ಮನೆಗೆ ಮಾಜಿ ಸಚಿವ ರಮಾನಾಥ ರೈ ಭೇಟಿ, ಸಾಂತ್ವನ - Karavali Times ಬರಿಮಾರು ಬಸ್ ದುರಂತದಲ್ಲಿ ಮೃತ ಬಾಲಕಿಯ ಮನೆಗೆ ಮಾಜಿ ಸಚಿವ ರಮಾನಾಥ ರೈ ಭೇಟಿ, ಸಾಂತ್ವನ - Karavali Times

728x90

24 July 2026

ಬರಿಮಾರು ಬಸ್ ದುರಂತದಲ್ಲಿ ಮೃತ ಬಾಲಕಿಯ ಮನೆಗೆ ಮಾಜಿ ಸಚಿವ ರಮಾನಾಥ ರೈ ಭೇಟಿ, ಸಾಂತ್ವನ

 ಬಂಟ್ವಾಳ, ಜುಲೈ 24, 2026 (ಕರಾವಳಿ ಟೈಮ್ಸ್) : ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಮರ ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಬಾಲಕಿಯ ಪೆರ್ನೆ ನೆಕ್ಕರೆ ಅಮೈ ನಿವಾಸಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ ಅವರು ಶುಕ್ರವಾರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ದುರಂತದಲ್ಲಿ ಅಮೂಲ್ಯ ಜೀವ ಕಳೆದುಕೊಂಡ ಬಾಲಕಿಯ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ಮೃತಳ ತಾಯಿ-ತಂದೆ ಹಾಗೂ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ದುಃಖದಲ್ಲಿ ಭಾಗಿಯಾದರು. ಈ ದುಃಖದ ಸಂದರ್ಭದಲ್ಲಿ ಆತ್ಮಸ್ಥೈರ್ಯ ಕಳೆದುಕೊಳ್ಳದೆ ಧೈರ್ಯದಿಂದ ಇರಬೇಕೆಂದು ಕುಟುಂಬಕ್ಕೆ ಸಾಂತ್ವನ ಹೇಳಿ, ಮೃತಳ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು.

ಈ ವೇಳೆ ದುರಂತದಲ್ಲಿ ಗಾಯಗೊಂಡಿರುವ ವಿದ್ಯಾರ್ಥಿಗಳು ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಮಾಜಿ ಸಚಿವರು ಇಂತಹ ದುರ್ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭ ಬುಡಾ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ಸುದೀಪ್ ಕುಮಾರ್ ಶೆಟ್ಟಿ, ನಾರಾಯಣ ನಾಯ್ಕ್, ಚಂದ್ರಶೇಖರ್ ಬಂಡಾರಿ, ಬಿ ಆರ್ ಅಂಚನ್, ಫಾರೂಕ್ ಪೆರ್ನೆ, ಗೀತೆಶ್ ಪೆರ್ನೆ ಮೊದಲಾದವರು ಜೊತೆಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬರಿಮಾರು ಬಸ್ ದುರಂತದಲ್ಲಿ ಮೃತ ಬಾಲಕಿಯ ಮನೆಗೆ ಮಾಜಿ ಸಚಿವ ರಮಾನಾಥ ರೈ ಭೇಟಿ, ಸಾಂತ್ವನ Rating: 5 Reviewed By: karavali Times
Scroll to Top