ಮಂಗಳೂರು, ಜುಲೈ 02, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಜುಲೈ 3 ರಂದು ಶುಕ್ರವಾರವೂ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ದರ್ಶನ್ ಎಚ್ ವಿ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲಾಡಳಿತ ಆದೇಶ ಧಿಕ್ಕರಿಸಿ ಯಾವುದೇ ಶಾಲೆಗಳು ತರಗತಿ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ.
2 July 2026
- Blogger Comments
- Facebook Comments
Subscribe to:
Post Comments (Atom)















0 comments:
Post a Comment