ಬಂಟ್ವಾಳ, ಜುಲೈ 11, 2026 (ಕರಾವಳಿ ಟೈಮ್ಸ್) : ಇರಾ ಗ್ರಾಮದ ಕುಂಡಾವು ನಿವಾಸಿ, ನಿವೃತ್ತ ಮುಖ್ಯ ಶಿಕ್ಷಕ ಗೋಪಾಲ ಮಾಸ್ಟರ್ (77) ಅವರು ಜುಲೈ 10 ರಂದು ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
1968ರಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ ಅವರು ಸುಳ್ಯ, ನರಿಂಗಾನ, ಇರಾ, ಸುರಿಬೈಲ್, ಮುದುಂಗಾರುಕಟ್ಟೆ ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಶಾಲಾ ಮುಖ್ಯೋಪಧ್ಯಾಯರಾಗಿ ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ದಿಗಾಗಿ ಅವರು ವಿಶೇಷವಾಗಿ ಶ್ರಮಿಸಿದ್ದರು. ಶಿಸ್ತು ಹಾಗೂ ಅತ್ಯುತ್ತಮ ನಡತೆ ಬೋಧಿಸಿದ ಅವರ ಕಾರ್ಯವನ್ನು ಗುರುತಿಸಿ ದ.ಕ ಜಿಲ್ಲಾ ಮಟ್ಟದಲ್ಲಿ "ಉತ್ತಮ ಶಿಕ್ಷಕ" ಪ್ರಶಸ್ತಿ ಸಹಿತ ಹಲವು ಗೌರವಗಳು ಅವರಿಗೆ ಸಂದಿವೆ.
ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿಯಾಗಿ ಹಾಗೂ ಕ್ಷೇತ್ರ ಅಭಿವೃದ್ಧಿ ಚಟುವಟಿಕೆಯಲ್ಲಿ ಅವರು ತೊಡಗಿಸಿಕೊಂಡಿದ್ದರು. ಇರಾ ಭಜನಾ ಮಂಡಳಿ ಸಹಿತ ಸ್ಥಳೀಯ ಸಂಘಸಂಸ್ಥೆಗಳಲ್ಲಿ ಅವರು ತೊಡಗಿಸಿಕೊಂಡಿದ್ದರು.















0 comments:
Post a Comment