ಪುತ್ತೂರು, ಜುಲೈ 29 2026 (ಕರಾವಳಿ ಟೈಮ್ಸ್) : ಪುತ್ತೂರು ನರಿಮೊಗರು ಗ್ರಾಮದ ಪುರುಷರಕಟ್ಟೆ-ಶಾಂತಿಗೋಡು ಆನಡ್ಕ ಕಡೆಗೆ ಹೋಗುವ ಮಾಯಂಗಳ ಎಂಬಲ್ಲಿನ ರಸ್ತೆಯಲ್ಲಿ ಜುಲೈ 27 ರಂದು ಸಂಚಾರಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಹಲವರ ವಿರುದ್ದ ಪುತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜುಲೈ 27 ರಂದು ಬೆಳಿಗ್ಗೆ ಕೆಲವು ಜನರು ಗುಂಪು ಸೇರಿ ರಸ್ತೆ ತಡೆಮಾಡಿ ವಾಹನ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಮಾಡುತ್ತಿರುವುದಾಗಿ ಪುತ್ತೂರು ನಗರ ಪೆÇಲೀಸ್ ಠಾಣಾ ಪಿಎಸ್ಸೈ ಸುರೇಶ್ ಸಿ ಟಿ ಅವರಿಗೆ ಮಾಹಿತಿ ಬಂದ ಮೇರೆಗೆ, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಸ್ಥಳದಲ್ಲಿ ಅರುಣ್ ಕುಮಾರ್ ಪುತ್ತಿಲ, ಮನೀಶ್ ಕುಲಾಲ್, ಅವಿನಾಶ್ ಜೋಗಿ, ಪ್ರೇಮರಾಜ್, ಪ್ರತೀಕ್ ಪುತ್ತಿಲ, ಶ್ರೀರಾಂ ಪಾತಾಳ, ಉಮೇಶ್ ಕೊಡಿಬೈಲು, ಅನಿಲ್ ತೆಂಕಿಲ, ರವಿ ಕುಮಾರ್ ರೈ, ಜಗದೀಶ್ ರೈ, ಪ್ರಶಾಂತ ನೆಕ್ಕಿಲಾಡಿ ಹಾಗೂ ಇತರರು ಸೇರಿದಂತೆ ಸುಮಾರು 25 ರಿಂದ 30 ಜನರು ರಸ್ತೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಯಾವುದೇ ಪೂರ್ವಾನುಮತಿ ಪಡೆಯದೇ ಅನಧಿಕೃತವಾಗಿ ರಸ್ತೆ ತಡೆ ಮಾಡಿ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿರುತ್ತಾರೆ. ಈ ಬಗ್ಗೆ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 93/2026 ಕಲಂ 189(2), 126(2) ಬಿ.ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.











0 comments:
Post a Comment