ಮಂಗಳೂರು, ಜುಲೈ 14, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 13 ರವರೆಗೆ 17,80,447 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 2,53,198 ಫಾರ್ಮ್‍ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಬೆಳ್ತಂಗಡಿ-29792, ಮೂಡಬಿದ್ರೆ-28468, ಮಂಗಳೂರು ನಗರ ಉತ್ತರ-27412, ಮಂಗಳೂರು ನಗರ ದಕ್ಷಿಣ-34217, ಮಂಗಳೂರು-43539, ಬಂಟ್ವಾಳ-27943, ಪುತ್ತೂರು-24796, ಸುಳ್ಯ-37031 ವಿಧಾನಸಭಾ ಕ್ಷೇತ್ರಗಳಲ್ಲಿ ಡಿಜಿಟೈಸ್ ಮಾಡಲಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.











0 comments:
Post a Comment