ಕಡಬ, ಜುಲೈ 04, 2026 (ಕರಾವಳಿ ಟೈಮ್ಸ್) : ದೇವಸ್ಥಾನದ ದುರಸ್ತಿ ಕಾಮಗಾರಿಗಾಗಿ ಕುಮಾರಧಾರಾ ನದಿಯಿಂದ ಅಕ್ರಮವಾಗಿ ಮರಳು ತೆಗೆದು ತಂದು ದೇವಸ್ಥಾನದ ಆವರಣದಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಪ್ರಕರಣವನ್ನು ಕಡಬ ಪೊಲೀಸರು ಜೂನ್ 27 ರಂದು ಬೇಧಿಸಿದ್ದಾರೆ.
ಜೂನ್ 27 ರಂದು ಕಡಬ ಪೆÇಲೀಸ್ ಠಾಣಾ ವ್ಯಾಪ್ತಿಯ ಚಾರ್ವಾಕ ಗ್ರಾಮದ ಕುಂಬ್ಲಾಡಿಯಲ್ಲಿರುವ ಶ್ರೀ ಕುಕ್ಕೆನಾಥ ಬಾಲ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಕುರಿತು ಬಂದ ಮಾಹಿತಿಯ ಮೇರೆಗೆ ಕಡಬ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ದೇವಸ್ಥಾನದ ಆವರಣದಲ್ಲಿ ಸುಮಾರು 10 ಸಾವಿರ ರೂಪಾಯಿ ಮೌಲ್ಯದ ಒಂದು ಟಿಪ್ಪರ್ ಲೋಡ್ ಮರಳು ಸಂಗ್ರಹಿಸಿಟ್ಟಿರುವುದು ಕಂಡುಬಂದಿದೆ. ಈ ಬಗ್ಗೆ ವಿಚಾರಣೆ ವೇಳೆ ದೇವಸ್ಥಾನದ ಅಧ್ಯಕ್ಷ ಗಣೇಶ್ ಅವರು ದೇವಸ್ಥಾನದ ದುರಸ್ತಿ ಕಾಮಗಾರಿಗಾಗಿ ಸಮೀಪದ ಕುಮಾರಧಾರ ನದಿಯಿಂದ ಯಾವುದೇ ಪರವಾನಿಗೆ ಪಡೆಯದೇ ಮರಳನ್ನು ಸಂಗ್ರಹಿಸಿರುವುದಾಗಿ ತಿಳಿಸಿರುತ್ತಾರೆ. ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಡಬ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















0 comments:
Post a Comment