ಮಂಗಳೂರು, ಜುಲೈ 24 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನಲೆಯಲ್ಲಿ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿರುವ ಕಾರಣ ಜುಲೈ 25 ರಂದು ಶನಿವಾರ ಸತತ ಮೂರನೇ ದಿನವೂ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ದರ್ಶನ್ ಎಚ್ ವಿ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲಾಡಳಿತ ಆದೇಶ ಧಿಕ್ಕರಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ.
24 July 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment