ಕೆಲಿಂಜ : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಆಸ್ಪತ್ರೆಗೆ - Karavali Times ಕೆಲಿಂಜ : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಆಸ್ಪತ್ರೆಗೆ - Karavali Times

728x90

6 July 2026

ಕೆಲಿಂಜ : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಆಸ್ಪತ್ರೆಗೆ

ಬಂಟ್ವಾಳ, ಜುಲೈ 06, 2026 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಗಾಯಗೊಂಡ ಘಟನೆ ವೀರಕಂಭ ಗ್ರಾಮದ ಕೆಲಿಂಜ ಪೆಲತ್ತಡ್ಕ ಎಂಬಲ್ಲಿ ಜೂನ್ 4 ರಂದು ಮಧ್ಯಾಹ್ನ ವೇಳೆ ಸಂಭವಿಸಿದೆ. 

ಗಾಯಗೊಂಡ ಸ್ಕೂಟರ್ ಸವಾರರನ್ನು ಡಿ ಅಬೂಬಕ್ಕರ್ ಸಿದ್ದೀಕ್ ಹಾಗೂ ಮಹಮ್ಮದ್ ಶಾಫಿ ಎಂದು ಹೆಸರಿಸಲಾಗಿದೆ. ಜಗದೀಶ್ ಎಂಬವರು ಚಲಾಯಿಸುತ್ತಿದ್ದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಅಟೋ ಚಾಲಕ ಜಗದೀಶ್ ಹಾಗೂ ಪ್ರಯಾಣಿಕರಾಗಿದ್ದ ಉಷಾ ಎಂಬವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. 

ಅಪಘಾತದಿಂದ ಗಾಯಗೊಂಡ ಸ್ಕೂಟರ್ ಸವಾರರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಒಕ್ಕೆತ್ತೂರು ನಿವಾಸಿ ಮಹಮ್ಮದ್ ಅಶ್ರಫ್ ವಿ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಕೆಲಿಂಜ : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಆಸ್ಪತ್ರೆಗೆ Rating: 5 Reviewed By: karavali Times
Scroll to Top